ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡಿ: ಪ್ರೊ. ತೇಜಸ್ವಿ ಕಟ್ಟಿಮನಿ

Last Updated 24 ನವೆಂಬರ್ 2022, 12:29 IST
ಅಕ್ಷರ ಗಾತ್ರ

ವಿಜಯಪುರ: ಆಧುನಿಕತೆಗೆ ತಕ್ಕಂತೆ ಶಿಕ್ಷಕರು ಜ್ಞಾನ ವೃದ್ಧಿಸಿಕೊಂಡು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಕೌಶಲ ಪೂರ್ಣ ಶಿಕ್ಷಣ ನೀಡಬೇಕು ಎಂದು ಆಂಧ್ರಪ್ರದೇಶ ಕೇಂದ್ರೀಯ ಆದಿವಾಸಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತೇಜಸ್ವಿ ಕಟ್ಟಿಮನಿ ಹೇಳಿದರು.

ಬಿ.ಎಲ್.ಡಿ.ಇ.ಸಂಸ್ಥೆಯ ಸ.ಬ.ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಅಮೃತ ಮಹೋತ್ಸವ ವರ್ಷಾಚರಣೆ ಹಾಗೂ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಕ್ಷಕರು ಅಗತ್ಯಗನುಗುಣವಾಗಿ ಮೌಲ್ಯಯುತ ಶಿಕ್ಷಣ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ವೃದ್ಧಿಸಲು ಶ್ರಮವಹಿಸಬೇಕು. ವಿದ್ಯಾರ್ಥಿಗಳಲ್ಲಿ ನಿರಂತರ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಲು ಪ್ರೇರೇಪಿಸಬೇಕು ಎಂದು ಹೇಳಿದರು.

ಬಿ.ಎಲ್.ಡಿ.ಇ.ಸಂಸ್ಥೆ ಮುಖ್ಯ ಆಡಳಿತಾಧಿಕಾರಿ ಡಾ.ಆರ್.ಬಿ.ಕೋಟ್ನಾಳ ಮಾತನಾಡಿ, ಶತಮಾನ ಇತಿಹಾಸ ಹೊಂದಿರುವ ಬಿ.ಎಲ್.ಡಿ.ಇ ಸಂಸ್ಥೆ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದೆ. ಅಲ್ಲದೇ, ಇಲ್ಲಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ, ಸರ್ವಾಂಗೀಣ ಅಭಿವೃದ್ಧಿಗೆ ಅತ್ಯುತ್ತಮ ಕೊಡುಗೆ ನೀಡಿದೆ. ಇದರಲ್ಲಿ ಶಿಕ್ಷಕರ ಪಾತ್ರ ಪ್ರಶಂಸನೀಯವಾಗಿದೆ. ಬದಲಾವಣೆಗೆ ತಕ್ಕಂತೆ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಗತ್ಯ ನೆರವು ನೀಡುತ್ತಾ ಪ್ರೋತ್ಸಾಹಿಸುತ್ತಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಪ್ರೊ. ಬಿ.ಎಸ್.ಬೆಳಗಲಿ ಮಾತನಾಡಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಮ್ಮ ಜೀವನದ ಅವಿಭಾಜ್ಯ ಅಂಗಗಳಾಗಿವೆ. ಪಠ್ಯೇತರ ಚಟುವಟಿಕೆಗಳಿಂದ ಪ್ರತಿಯೊಬ್ಬರು ಮಾನಸಿಕವಾಗಿ ಸದೃಡತೆ ಹೊಂದಲು ಸಾಧ್ಯ. ವಿದ್ಯಾರ್ಥಿಗಳು ಕೇವಲ ಸತತ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಂಡು ವ್ಯಕ್ತಿತ್ವ ವಿಕಸನ ಹೊಂದಬೇಕು ಎಂದು ಹೇಳಿದರು.

ಆಡಳಿತಾಧಿಕಾರಿ ಡಾ.ಕೆ.ಜಿ.ಪೂಜಾರಿ, ಪ್ರಾಚಾರ್ಯ ಡಾ. ಯು. ಎಸ್ ಪೂಜೇರಿ, ಉಪಪ್ರಾಚಾರ್ಯ ಪ್ರೊ. ಬಿ.ಎಸ್ ಬಗಲಿ, ಐಕ್ಯೂಎಸಿ ನಿರ್ದೇಶಕ ಡಾ.ಪಿ.ಎಸ್.ಪಾಟೀಲ, ಸಂಯೋಜಕ ಡಾ.ಕೆ. ಮಹೇಶಕುಮಾರ, ಸಾಂಸ್ಕೃತಿಕ ವಿಭಾಗ ಕಾರ್ಯಾಧ್ಯಕ್ಷ ಪ್ರೊ. ಬಿ.ಎಸ್.ಬೆಳಗಲಿ, ದೈಹಿಕ ನಿರ್ದೇಶಕ ಎಸ್. ಕೆ. ಪಾಟೀಲ, ನಿವೃತ್ತ ಪ್ರಾಚಾರ್ಯರಾದ ಡಾ.ಎ.ಎಸ್.ಪೂಜಾರ, ಡಾ.ಎಸ್.ಟಿ.ಮೆರವಾಡೆ, ಚಾಣಕ್ಯ ಕರಿಯರ್ ಅಕಾಡೆಮಿ ಮುಖ್ಯಸ್ಥ ಡಾ.ಎನ್.ಎಂ.ಬಿರಾದಾರ, ಪ್ರೊ. ಎಚ್.ಎಂ.ಮುಜಾವರ, ಡಾ.ಉಷಾದೇವಿ ಹಿರೇಮಠ, ಪ್ರೊ. ವಿದ್ಯಾ ಪಾಟೀಲ, ಪ್ರೊ. ಡಾ. ಎಸ್.ಎನ್. ಉಂಕಿ, ಡಾ.ಮಂಜುನಾಥ ಜ್ಯೋತಿ,ಪ್ರೊ. ರಶ್ಮಿ ಪಾಟೀಲ ಸೇರಿದಂತೆ ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT