ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

Last Updated 30 ಏಪ್ರಿಲ್ 2022, 11:28 IST
ಅಕ್ಷರ ಗಾತ್ರ

ವಿಜಯಪುರ: ಶಿಶು ಅಭಿವೃದ್ಧಿ ಯೋಜನೆ ವಿಜಯಪುರ ನಗರ, ಗ್ರಾಮೀಣ ಮತ್ತು ಬಸವನ ಬಾಗೇವಾಡಿ ತಾಲ್ಲೂಕು ವ್ಯಾಪ್ತಿಯಲ್ಲಿಖಾಲಿ ಇರುವಅಂಗನವಾಡಿ ಕಾರ್ಯಕರ್ತೆಯರ ಮತ್ತು ಅಂಗನವಾಡಿ ಸಹಾಯಕಿಯ ಹುದ್ದೆಗೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ವಿಜಯಪುರ ನಗರದ ಎರಡು ಅಂಗನವಾಡಿ ಕಾರ್ಯಕರ್ತೆಯರ ಮತ್ತು 47 ಅಂಗನವಾಡಿ ಸಹಾಯಕಿಯ ಹುದ್ದೆಗೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ವಿಜಯಪುರ ಗ್ರಾಮೀಣ ತಾಲ್ಲೂಕಿನ ಹೊಳೆಹಂಗರಗಿ, ಹೊಕ್ಕುಂಡಿ, ಬಿಜ್ಜರಗಿ ಬೊಸಲೆವಸ್ತಿ, ಮಂಗಳೂರು, ಹಡಗಲಿ ತಾಂಡಾ(2), ಹಡಗಲಿ, ಹೊನವಾಡ, ಬೆಳ್ಳುಬ್ಬಿ, ಹೊನ್ನಳ್ಳಿ, ಕಾಖಂಡಕಿ, ಹಣಮಸಾಗರ, ನಾಗಠಾಣ, ಹಾಗೂ ಶಿವಣಗಿ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ.

ಈ ಎಲ್ಲ ಮಾಹಿತಿಯನ್ನು ಈ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ತಾತ್ಕಾಲಿಕವಾಗಿ ಆಯ್ಕೆಯಾದ ಹುದ್ದೆಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲಾತಿಗಳೊಂದಿಗೆ ಸಲ್ಲಿಸಬಹುದು.

ಬಸವನಬಾಗೇವಾಡಿ ತಾಲ್ಲೂಕಿನಲ್ಲಿ ಖಾಲಿ ಇರುವ 1 ಅಂಗನವಾಡಿ ಕಾರ್ಯಕರ್ತೆ ಹಾಗೂ 12 ಅಂಗನವಾಡಿ ಸಹಾಯಕಿಯರು ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಬಸವನಬಾಗೇವಾಡಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ನೋಟಿಸ್ ಬೋರ್ಡ್‌ನಲ್ಲಿ ಮೇ.2ರಂದು ಪ್ರಕಟಿಸಲಾಗುವುದು.

ತಾತ್ಕಾಲಿಕ ಆಯ್ಕೆಗೊಂಡ ಅಭ್ಯರ್ಥಿಗಳ ಬಗ್ಗೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲಾತಿಗಳೊಂದಿಗೆ ಮೇ 2ರಿಂದ ಮೇ 16ರವರೆಗೆ ಕಚೇರಿ ವೇಳೆಯಲ್ಲಿ ಆಕ್ಷೇಪಣಿ ಸಲ್ಲಿಸಬಹುದಾಗಿದೆ ಎಂದು ಬಸವನಬಾಗೇವಾಡಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT