ಶುಕ್ರವಾರ, ಆಗಸ್ಟ್ 7, 2020
22 °C

ಪಿಯುಸಿ ಫಲಿತಾಂಶ | ಕೃಷಿ ಕೂಲಿಕಾರರ ಮಗ ವಿಜಯಪುರ ಜಿಲ್ಲೆಗೆ ಪ್ರಥಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂದಗಿ: ಕೃಷಿ ಕೂಲಿಕಾರರ ಪುತ್ರ ಮಾಳಪ್ಪ ನಿಂಗಪ್ಪ ಹೊಸಮನಿ ದ್ವಿತೀಯ ಪಿಯುಸಿ ಕಲಾ ವಿಭಾಗ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಪಟ್ಟಣದ ಬಸವೇಶ್ವರ ವಿದ್ಯಾ ಪ್ರಸಾರ ಸಮಿತಿಯ ಜ್ಞಾನ ಭಾರತಿ ಪಿಯು ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದರು. ಒಟ್ಟು 586 (ಶೇ 97.66) ಅಂಕಗಳನ್ನು ಪಡೆದಿದ್ದಾರೆ, ಕನ್ನಡ ಹಾಗೂ ಶಿಕ್ಷಣಶಾಸ್ತ್ರ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ, ಹಿಂದಿ 98, ಇತಿಹಾಸ 98, ಸಮಾಜಶಾಸ್ತ್ರ 97, ರಾಜ್ಯಶಾಸ್ತ್ರದಲ್ಲಿ 93 ಅಂಕ ಗಳಿಸಿದ್ದಾರೆ.

ಫಲಿತಾಂಶ ಪ್ರಕಟವಾದ ಸಂದರ್ಭದಲ್ಲಿ ಮಾಳಪ್ಪ ತನ್ನ ತಂದೆ, ತಾಯಿ ಜೊತೆಗೆ ಕೃಷಿ ಕೆಲಸದಲ್ಲಿದ್ದರು. ‘ಕೆಎಎಸ್‌ ಪಾಸು ಮಾಡಬೇಕೆಂಬ ಆಸೆ ಇದೆ. ಕಾಲೇಜಿನವರ ಪ್ರೋತ್ಸಾಹ ಮತ್ತು ದಿನದಲ್ಲಿ ಹತ್ತು ಗಂಟೆ ಓದುತ್ತಿದ್ದರಿಂದ ಈ ಫಲಿತಾಂಶ ಸಾಧ್ಯವಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು