ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ’ 

Last Updated 1 ಸೆಪ್ಟೆಂಬರ್ 2021, 16:32 IST
ಅಕ್ಷರ ಗಾತ್ರ

ವಿಜಯಪುರ: ರಾಷ್ಟ್ರೀಯ ಹೆದ್ದಾರಿ ವಿಭಾಗದ ರೈಲ್ವೆ ಮೇಲ್ಸೇತುವೆ ನಿರ್ಮಿಸುವ ಕಾಮಗಾರಿ 24 ತಿಂಗಳ ಒಳಗಾಗಿ ಪೂರ್ಣ ಗೊಳಿಸುವಂತೆ ಸಂಸದ ರಮೇಶ ಜಿಗಜಿಣಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಹೊನಗನಹಳ್ಳಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ ವಿಭಾಗದ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದರು.

ವಿಜಯಪುರದಿಂದ ಹುಬ್ಬಳ್ಳಿಗೆ ತೆರಳುವ ಮಾರ್ಗದಹೊನಗನಹಳ್ಳಿ ಬಳಿ ₹ 58.13 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.

ಕಾಮಗಾರಿಯನ್ನು ತ್ವರಿತವಾಗಿ, ಗುಣಮಟ್ಟದಲ್ಲಿ ನಿಗದಿತ ಅವಧಿ ಒಳಗಾಗಿ ಪೂರ್ಣಗೊಳಿಸಬೇಕು. ಕೋವಿಡ್ ಕಾರಣದಿಂದ ವಿಳಂಬವಾಗಿದ್ದ ರಾಷ್ಟ್ರೀಯ ಹೆದ್ದಾರಿ ಬಾಕಿ ಉಳಿದ ಕಾಮಗಾರಿಗಳನ್ನು ಕೂಡ ಶೀಘ್ರ ಮುಗಿಸಲು ಕ್ರಮಕೈಗೊಳ್ಳಲು ಸೂಚಿಸಿದರು.

ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಕಾರ್ಯನಿರ್ವಾಹಕ ಎಂಜಿನಿಯರ್‌ ಅರುಣಕುಮಾರ ಪಾಟೀಲ, ಎ.ಎಂ.ಕೊಕರೆ, ವಿವೇಕ ಮಠ, ವಿಜಯ ಜೋಶಿ, ವಿಠ್ಠಲ ನಡುವಿನಕೇರಿ, ವಿಠ್ಠಲ ಕೆರಸೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT