ಬುಧವಾರ, ಜೂನ್ 16, 2021
27 °C

ಮಳೆ ಹಾನಿ: ಶಾಸಕ ಚವ್ಹಾಣ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಇತ್ತೀಚೆಗೆ ಸುರಿದ ಮಳೆಯಿಂದಾಗಿ ಚರಂಡಿಗಳ ನೀರು ಮನೆಗಳಿಗೆ ನುಗ್ಗಿ ಹಾನಿಯಾಗಿರುವ ನಗರದ ವಾರ್ಡ್ 15ರ ಖಾವಿ ಪ್ಲಾಟ್‌ಗೆ ನಾಗಠಾಣ ಶಾಸಕ ಡಾ.ದೇವಾನಂದ ಚವ್ಹಾಣ ಭೇಟಿ ನೀಡಿ ಪರಿಶೀಲಿಸಿದರು. 

ಮಳೆ ನೀರು ಸರಾಗವಾಗಿ ಹೋಗಲು ಅನುಕೂಲವಾಗುವಂತೆ ಚರಂಡಿ ನಿರ್ಮಿಸಿ, ರಸ್ತೆ ಗುಂಡಿಗಳನ್ನು ಮುಚ್ಚಿ ದುರಸ್ತಿಗೊಳಿಸುವಂತೆ ಸ್ಥಳದಲ್ಲಿದ್ದ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಮಹಾನಗರಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಸಹಾಯಕ ಎಂಜಿನಿಯರ್ ಸುನೀಲ್ ಹಿರೇಣಿ, ಶೇಖರ್ ಮಾಳಿ ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು