ಭಾನುವಾರ, ಜೂನ್ 26, 2022
21 °C

ಅಬ್ಬರಿಸಿದ ರೋಹಣಿ; ಜನಜೀವನ ಅಸ್ತವ್ಯಸ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಮಧ್ಯಾಹ್ನ ಒಂದು ತಾಸು ಮುಂಗಾರು ಮಳೆಯ ಗುಡುಗು, ಸಿಡಿಲಿನೊಂದಿಗೆ ಅಬ್ಬರಿಸಿ ಸುರಿದಿದೆ.

ವಿಜಯಪುರ ನಗರ, ಕಲಕೇರಿ, ತಾಳಿಕೋಟೆ, ಹೊರ್ತಿ, ದೇವರ ಹಿಪ್ಪರಗಿ, ಸಿಂದಗಿ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿದಿದೆ. ಮಳೆಯ ಆರ್ಭಟಕ್ಕೆ ಚರಂಡಿಗಳು ಉಕ್ಕಿ ರಸ್ತೆ ಮೇಲೆ ನೀರು ಹಳ್ಳವಾಗಿ ಹರಿಯಿತು. ವಾಹನ ಸಂಚಾರಕ್ಕೂ ಅಡಚಣೆಯಾಯಿತು.

ನಗರದಲ್ಲಿ ಮಳೆ ನೀರಿನೊಂದಿಗೆ ಚರಂಡಿ ಮತ್ತು ರಸ್ತೆ ಮೇಲಿನ ಹೊಲಸು ಸಹ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಳಿಸಿತು. 

ಗ್ರಾಮೀಣ ಪ್ರದೇಶದಲ್ಲಿ ಹೊಲ, ತೋಟಗಳಲ್ಲಿ ನೀರು ನಿಂತಿದ್ದ ದೃಶ್ಯ ಎಲ್ಲೆಡೆ ಕಂಡುಬಂದಿತು. ಗಾಳಿ, ಮಳೆಗೆ ಕೆಲವೆಡೆ ಗಿಡ, ಮರಗಳ ಕೊಂಬೆಗಳು ಮುರಿದು ನೆಲಕ್ಕುರುಳಿವೆ. ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಜಿಲ್ಲೆಗೆ ಅಡಿ ಇಡುವಾಗಲೇ ಮುಂಗಾರು ಮಳೆ ಧಾರಾಕಾರವಾಗಿ ಸುರಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು