ವಿಜಯಪುರ: ಜಿಲ್ಲೆಯಲ್ಲಿ ಸೆ.26 ರಿಂದ 28ರ ವರೆಗೆ ಬಿರುಗಾಳಿಯೊಂದಿಗೆ ಭಾರಿ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಸೆ.29 ರಿಂದ ಅ.3ರ ವರೆಗೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹಾಗೂ ಕೆಎಸ್ಎನ್ಡಿಎಂಸಿ ಮುನ್ಸೂಚನೆ ನೀಡಿದೆ.

‘ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ರಕ್ಷಣೆ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧರಾಗಿರಲು’ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚಿಸಿದ್ದಾರೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯ ಮಳೆ-ಗಾಳಿಯಿಂದ ಜನ-ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆ ಹಾಗೂ ಅನಾನೂಕೂಲತೆವಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದಿದ್ದಾರೆ.

ಉಪವಿಭಾಗ, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಣ ನೋಡಲ್ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು, ದಿನದ 24 ಗಂಟೆ ಕಾರ್ಯನಿರ್ವಹಿಸಿ, ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.