ವಿಜಯಪುರ: ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳುವಂತೆ ಜನರನ್ನು ಜಾಗೃತಿಗೊಳಿಸುವ ಕಾರ್ಯವನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದರು.

ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕೋವಿಡ್ ಲಸಿಕೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರದ ಆರೋಗ್ಯ ಕೇಂದ್ರಗಳ ಶಾಂತಿನಗರ, ನವಭಾಗ್, ಎಪಿಎಂಸಿ, ದರ್ಗಾ, ಗಣೇಶ ನಗರಗಳಲ್ಲಿ ಈ ವಾಹನವು ಸಂಚರಿಸಿ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ಮೂರು ವಾಹನಗಳನ್ನು ಪ್ರಚಾರಕ್ಕೆ ಬಳಸಲಾಗುತ್ತಿದ್ದು ಬಸವನಬಾಗೇವಾಡಿ, ಮುದ್ದೇಬಿಹಾಳದಲ್ಲಿ ಈ ವಾಹನಗಳ ಮೂಲಕ ಪ್ರಚಾರ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೋವಿಡ್ ಮೊದಲನೇ ಹಾಗೂ ಎರಡನೇ ಡೋಸ್ ಲಸಿಕೆಯನ್ನು ಪಡೆಯುವಂತೆ ಜನರಿಗೆ ತಿಳಿಸಿ, ಗುರಿಗೆ ತಕ್ಕಂತೆ ವ್ಯಾಕ್ಸಿನೇಷನ್ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಡಾ. ಮಹೇಶ್ ನಾಗರಬೆಟ್ಟ, ಡಾ.ಕವಿತಾ ದೊಡ್ಡಮನಿ, ತಾಲ್ಲೂಕು ಆರೋಗ್ಯ ಅಧಿಕಾರಿ ನೂರ್ ಅಮ್ಮದ್ ಬಾಗವಾನ್, ಅಜಿಮ್ ಪ್ರೇಮ್ಜಿ ಫೌಂಡೇಶನ್ ಸದಸ್ಯರಾದ ಸುನೀತಾ, ನಾನಾಗೌಡ, ಡಾ. ಬಾಲಕೃಷ್ಣ, ಶಫೀಕ, ಬಗದಾದಿ, ಇಂದ್ರೇಶ್ ಬಕ್ಷಿ, ಜಮೀರ್ ಬಾಂಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.