ಗುರುವಾರ , ಜೂನ್ 24, 2021
25 °C

ಬಾಲಕಿಯರ ಅತ್ಯಾಚಾರ ಪ್ರಕರಣ: ಮರು ಮರಣೋತ್ತರ ಪರೀಕ್ಷೆಗೆ ಪೋಷಕರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಬಸವನಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಇತ್ತೀಚೆಗೆ ನಡೆದ ಇಬ್ಬರು ಬಾಲಕಿಯರ ಅತ್ಯಾಚಾರ, ಕೊಲೆ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲಾಗಿದ್ದು, ಮರು ಮರಣೋತ್ತರ ಪರೀಕ್ಷೆಯನ್ನು ನಡೆಸಬೇಕು ಎಂದು ಬಾಲಕಿಯರ ಪೋಷಕರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಗ್ರಾಮದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ. ಪೊಲೀಸ್ ಇಲಾಖೆ ಕೈಗೊಂಡಿರುವ ತನಿಖೆಯ ದಿಕ್ಕು ತಪ್ಪಿಸಿ, ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಇಬ್ಬರು ಬಾಲಕಿಯರು ಚೆನ್ನಾಗಿಯೇ ಇದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುವಂಥ ತೊಂದರೆಗಳೇನೂ ಇರಲಿಲ್ಲ. ಆದರೆ, ಆರೋಪಿಗಳು ಅವರ ಮೇಲೆ ದೌರ್ಜನ್ಯ ಎಸಗಿ, ಕೊಲೆ ಮಾಡಿ, ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಕರಣದ ಹಿಂದಿರುವ ನೈಜವನ್ನು ಬಯಲಿಗೆಳೆಯಯುವ ಸಂಬಂಧ ಹಾಗೂ ನಮಗೆ ನ್ಯಾಯ ಒದಗಿಸಲು ಶವಗಳ ಮರಣೋತ್ತರ ಪರೀಕ್ಷೆಯನ್ನು ತಮ್ಮ ನೇತೃತ್ವದಲ್ಲಿ ನಡೆಸಬೇಕೆಂದು ಪೋಷಕರು ಒತ್ತಾಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು