ಬುಧವಾರ, ಸೆಪ್ಟೆಂಬರ್ 22, 2021
24 °C

ಅಪ್ರಾಪ್ತೆ ಮೇಲೆ ಅತ್ಯಾಚಾರ: ಕರವೇ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಚಿತ್ರದುರ್ಗ ಜಿಲ್ಲೆಯ ಬ್ರಹ್ಮಸಾಗರ ಹೋಬಳಿ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣ ಖಂಡಿಸಿ  ಕರ್ನಾಟಕ ರಕ್ಷಣಾ ವೇದಿಕೆ (ನಮ್ಮ ಬಣ) ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.

ವೇದಿಕೆ ಜಿಲ್ಲಾಧ್ಯಕ್ಷ ಶೇಷರಾವ್ ಮಾನೆ ಮಾತನಾಡಿ, ರಾಜ್ಯ, ದೇಶದ ವಿವಿಧೆಡೆ ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಬಾಲಕಿಯ ಕುಟುಂಬಕ್ಕೆ ರಕ್ಷಣೆ ನೀಡಿ ಸೂಕ್ತ ಪರಿಹಾರ ನೀಡಬೇಕು, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಕರವೇ ಮಹಿಳಾ ಘಟಕದ ಅಧ್ಯಕ್ಷೆ ಭಾರತಿ ಟಂಕಸಾಲಿ ಮಾತನಾಡಿ, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಕೊಲೆ, ದೌರ್ಜನ್ಯಗಳಿಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕು ಎಂದರು.

ರಾಜ್ಯ ಸಮಿತಿ ಕಾರ್ಯಾಧ್ಯಕ್ಷ ಗುಲಾಬ್‌ ಭಂಡಾರಿ, ಗೌರವಾಧ್ಯಕ್ಷ ಎಂ.ಎಂ. ಖಲಾಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಕೆ. ಬನ್ನಟ್ಟಿ, ಭೀಮಾಶಂಕರಯ್ಯ ವಿರಕ್ತಮಠ, ಪ್ರಕಾಶ ನಡುವಿನಕೇರಿ, ಕೆ.ಎನ್. ಹಿರೇಮಠ, ರಾಜು ವಾಲಿಕಾರ, ಶ್ರೀಶೈಲ ಕುಮಸಗಿ, ಸುರೇಶ ನಿಡೋಣಿ, ಮಲ್ಲಿಕಾರ್ಜುನ ಕೊಂಡಗೂಳಿ, ಶಾಂತಾಬಾಯಿ ದಿಕ್ಸಂಗಿ, ವಿಲಾಸ ಮಸೂತಿ, ಶಾಲನ ನಾಲಬಂದ, ಎಚ್.ವೈ. ಝಳಕಿ, ವಸಂತರಾವ್‌ ಕುಲಕರ್ಣಿ, ಅರವಿಂದ ಗುನ್ನಾಪೂರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು