ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ: ಕಠಿಣ ಕಾನೂನು ರಚನೆಗೆ ಆಗ್ರಹ 

Last Updated 8 ಜನವರಿ 2021, 14:09 IST
ಅಕ್ಷರ ಗಾತ್ರ

ವಿಜಯಪುರ:ಉತ್ತರ ಪ್ರದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಅರ್ಚಕ ಹಾಗೂ ಇತರ ಇಬ್ಬರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಖಂಡಿಸಿಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸಂಯುಕ್ತ ಅಂಗನವಾಡಿ ನೌಕರರ ಸಂಘ, ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ಹಾಗೂ ಅಕ್ಷರ ದಾಸೋಹ ಸಂಘಟನೆಗಳ ಒಕ್ಕೂಟವಾದ ಸ್ಕೀಮ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ.,ಉತ್ತರ ಪ್ರದೇಶದಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಪೊಲೀಸರ‌ ‌ನಿರ್ಲಕ್ಷ್ಯವೇ ಇಂತಹ ಘಟನೆಗಳು ಹೆಚ್ಚಾಗಲು ಕಾರಣವಾಗಿದೆ ಎಂದು ಆರೋಪಿಸಿದರು.

ಉತ್ತರ ಪ್ರದೇಶದಲ್ಲಿ ಮಹಿಳೆಯರು, ದಲಿತರು ಹಾಗೂ ಆದಿವಾಸಿಗಳು ಸೇರಿದಂತೆ ಸಾಮಾನ್ಯ ಜನರ ಬದುಕಿಗೆ ಎಳ್ಳಷ್ಟೂ ಭದ್ರತೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಜಂಗಲ್ ರಾಜ್ ಚಾಲ್ತಿಯಲ್ಲಿದೆ. ಅಪರಾಧಿಗಳಿಗೆ ಶಿಕ್ಷೆ ಬದಲು ಕುಮ್ಮಕ್ಕು ದೊರೆಯುವಂತಿದೆ ಎಂದು ಆರೋಪಿಸಿದರು.

ಎಐಎಂಎಸ್‍ಎಸ್ ಜಿಲ್ಲಾ ಸಂಚಾಲಕಿ ಶಿವಬಾಳಮ್ಮ ಕೊಂಡಗೂಳಿ ಮಾತನಾಡಿ, ಕಠಿಣ ಕಾನೂನುಗಳಿಲ್ಲದ ಕಾರಣ ಇಂತಹ ಪ್ರಕರಣಗಳಲ್ಲಿ ಆರೋಪಿಗಳು ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಲಕ್ಷ್ಮೀ ಲಕ್ಷೇಟ್ಟಿ, ಬಿ.ಆರ್.ನದಾಫ, ಸವಿತಾ ತೇರದಾಳ, ಸಾವಿತ್ರಿ ನಾಗರತಿ, ಲಲಿತಾ ಪವಾರ, ದಿಲ್‌ ಶಾದ್‌ ನದಾಫ್, ಪಾರ್ವತಿ ಪವಾರ, ನಾಗಮ್ಮ ಮಡಿವಾಳರ, ವಿಜಯಲಕ್ಷ್ಮೀ ಹುಣಶ್ಯಾಳ, ದಿಶಾ ದೊಡಮನಿ, ಗುರುಬಾಯಿ ಹಿರೆಮಠ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT