ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಶಿವಾನಂದ ಪಾಟೀಲ ಸ್ವಾಗತಕ್ಕೆ ಸಿದ್ದತೆ

Published 2 ಜೂನ್ 2023, 17:16 IST
Last Updated 2 ಜೂನ್ 2023, 17:16 IST
ಅಕ್ಷರ ಗಾತ್ರ

ಬಸವನಬಾಗೇವಾಡಿ: ರಾಜ್ಯದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಜೂನ್ 5 ರಂದು ಮೊದಲ ಬಾರಿಗೆ ಪಟ್ಟಣಕ್ಕೆ ಆಗಮಿಸುತ್ತಿರುವ ಸಚಿವ ಶಿವಾನಂದ ಪಾಟೀಲ ಅವರನ್ನು  ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಅದ್ದೂರಿಯಾಗಿ ಸ್ವಾಗತಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30 ಕ್ಕೆ ಡಾ.ಅಂಬೇಡ್ಕರ್‌ ವೃತ್ತದಿಂದ ಮೆರವಣಿಗೆ ಮೂಲಕ ಬಸವ ಭವನಕ್ಕೆ ಬರಮಾಡಿಕೊಂಡ ನಂತರ ಸನ್ಮಾನ ಸಮಾರಂಭ ನಡೆಯಲಿದೆ.  ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೊಷ್ಠಿಯಲ್ಲಿ ಮುಖಂಡರಾದ ಭರತ ಅಗರವಾಲ, ಬಸವರಾಜ ಗೊಳಸಂಗಿ, ಶೇಖರ ಗೊಳಸಂಗಿ, ಎಂ.ಜಿ.ಆದಿಗೊಂಡ, ರಮೇಶ ಯಳಮೇಲಿ, ಕಮಲಸಾಬ ಕೊರಬು, ಬಸವರಾಜ ಹಾರಿವಾಳ, ರವಿ ರಾಠೋಡ, ಜಟ್ಟಿಂಗರಾಯ ಮಾಲಗಾರ, ಸಂಗನಬಸು ಪೂಜಾರಿ, ಸುಭಾಸ ಚಿಕ್ಕೊಂಡ, ಬಂದೇನಮಾಜ ನಂದವಾಡಗಿ, ನಜೀರ ಗಣಿ, ರುಕ್ಮಿಣಿ ರಾಠೋಡ, ಜಗದೇವಿ ಗುಂಡಳ್ಳಿ, ಮಲ್ಲೇಶ ಕಡಕೋಳ, ಮುತ್ತು ಕಿಣಗಿ, ಶೇಖರಗೌಡ ಪಾಟೀಲ, ಸಂಗಯ್ಯ ಕಾಳಹಸ್ತೇಶ್ವರಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT