ವಿಜಯಪುರ: ‘ಸಚಿವ ಸಂಪುಟ ಎಂದರೆ ಕೇವಲ ಬೆಳಗಾವಿ, ಬೆಂಗಳೂರು ಎಂಬಂತಾಗಿದೆ. ಈ ಪ್ರಾದೇಶಿಕ ಅಸಮಾನತೆ ತೊಡೆದುಹಾಕಲು ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇತರ ಜಿಲ್ಲೆಗಳ ಶಾಸಕರ ಆಕಾಂಕ್ಷಿಗಳಿಗೂ ಮುಖ್ಯಮಂತ್ರಿ ಸ್ಪಂದಿಸಬೇಕು. ಮಹೇಶ ಕುಮಠಳ್ಳಿ ಅವರಿಗೆ ಏಕೆ ಸಚಿವ ಸ್ಥಾನ ನೀಡಿಲ್ಲ ಎಂಬುದು ಗೊತ್ತಾಗಬೇಕು. ಪ್ರಾದೇಶಿಕ ಅಸಮಾನತೆ, ಬಜೆಟ್‌ನಲ್ಲಿ ಹಣ ಮೀಸಲು ಇಡುವ ಬಗ್ಗೆ ಶಾಸಕರೊಂದಿಗೆ ಚರ್ಚಿಸಬೇಕು’ ಎಂದು ಆಗ್ರಹಿಸಿದರು.

‘ಸಂಪುಟ ವಿಸ್ತರಣೆಯಿಂದ ಬಿಜೆಪಿ ಮೂಲ ಶಾಸಕರಲ್ಲಿ ಅಸಮಾಧಾನ ಉಂಟಾಗಿದೆ. ಇದನ್ನು ಹೋಗಲಾಡಿಸಲು ಸಭೆ ಕರೆಯಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.