ವಿಜಯಪುರ: ಚಿತ್ರದುರ್ಗದ ರೇಣುಕಸ್ವಾಮಿ ಅಪಹರಿಸಿ ಹತ್ಯೆ ಮಾಡಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಪದಾಧಿಕಾರಿಗಳು ಶುಕ್ರವಾರ ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ನಟ ದರ್ಶನ ಅವರು ಅನೇಕ ಪ್ರಭಾವಿ ರಾಜಕಾರಣಿಗಳ ಆಪ್ತರಾಗಿದ್ದು, ಸಾಕ್ಷಿನಾಶ ಜೊತೆಗೆ ಪ್ರಕರಣದ ತನಿಖೆಯಲ್ಲಿ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಪಕ್ಷದ ಮುಖಂಡರಾದ ಗಣಪತಿ ರಾಠೋಡ, ದೀಪಾ ಮರನೂರ, ದುರ್ಗಪ್ಪ ಬೂದಿಹಾಳ, ಲಕ್ಷ್ಮಣ ಚಡಚಣ, ರಾಕೇಶ ಇಂಗಳಗಿ, ಪ್ರವೀಣ ಕನಸೇ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.