ಶುಕ್ರವಾರ, ಏಪ್ರಿಲ್ 23, 2021
24 °C

ಮೊಹರೆ ಅಧ್ಯಯನ ಪೀಠ ಸ್ಥಾಪನೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣದ ರುವಾರಿ, ಪತ್ರಕರ್ತ ಮೊಹರೆ ಹಣಮಂತರಾಯರ ಹೆಸರಿನಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ವಿಜಯಪುರ ಯುವ ಭಾರತ ಸಮಿತಿ ಸಂಘಟನೆ ವತಿಯಿಂದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಮಾರ್ಚ್‌ 4ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಈ ವಿಷಯವನ್ನು ಚರ್ಚಿಸಿ ಬರುವ ಬಜೆಟ್‌ನಲ್ಲಿ ಮೊಹರೆ ಹಣಮಂತರಾಯರ ಅಧ್ಯಯನ ಪೀಠ ಸ್ಥಾಪನೆ ಘೋಷಣೆ ಮಾಡಬೇಕು ಎಂದು ಸಮಿತಿಯ ಸದಸ್ಯರು ಕಾರಜೋಳ ಬಳಿ ಮನವಿ ಮಾಡಿದರು.

ಸಂಘಟನೆಯ ಮುಖಂಡ ವಿನೋದಕುಮಾರ ಮಣೂರ ಮಾತನಾಡಿ, ಮೊಹರೆ ಅವರು ಕನ್ನಡ ನಾಡಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದು, ಪತ್ರಿಕಾ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯದ ಬಗ್ಗೆ ಜನಜಾಗೃತಿ ಮೂಡಿಸಿದ್ದಾರೆ ಎಂದರು. 

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಮೊಹರೆ ಹಣಮಂತರಾಯರು ಮಹಾತ್ಮ ಗಾಂಧಿಯವರ ಕರೆಗೆ ಓಗೊಟ್ಟು ತಮ್ಮ ವಕೀಲಿ ವೃತ್ತಿಯನ್ನು ತೊರೆದು ಬಂದು ಸ್ವಾತಂತ್ರ್ಯ ಸಂಗ್ರಾಮದಲ್ಲಿ ದುಮುಕಿದವರು, ಯುವ ಪೀಳಿಗೆಗೆ ಆದರ್ಶವಾಗಬೇಕಾಗಿರುವ ಮೊಹರೆಯವರ ನೆನಪುಗಳು ನಶಿಸಿ ಹೋಗಲು ಬಿಡಬಾರದು ಎಂದು ಹೇಳಿದರು.

ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿಧ್ಯಾಲಯದಲ್ಲಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಮೊಹರೆ ಹಣಮಂತರಾಯರ ಅಧ್ಯಯನ ಪೀಠ ಸ್ಥಾಪನೆಯಾದಲ್ಲಿ ವಿದ್ಯಾರ್ಥಿನಿಯರಿಗೆ ಆದರ್ಶ ಪತ್ರಕರ್ತನ ಬದುಕು ಬರಹದ ಪರಿಚಯ ಮಾಡಿಕೊಡುವುದಷ್ಟೇ ಅಲ್ಲದೇ ಸಂಶೋಧನೆಗೆ ಪ್ರೇರಣೆಯಾಗುವುದು ಎಂದರು.

ವಿರೇಶ ಗೊಬ್ಬುರ, ಸತೀಶ ಭಾಗಿ, ಗಿರೀಶ ಕುಲಕರ್ಣಿ, ಸಾಗರ ಗಾಯಕವಾಡ, ಸಂತೋಷ ಝಳಕಿ, ಸಚೀನ ಪಾಟೀಲ ಹಲಸಂಗಿ, ಅನೀಲ ಧನಶ್ರೀ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು