ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ರದ್ದುಗೊಳಿಸಲು ಆಗ್ರಹ

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಪ್ರತಿಭಟನೆ
Last Updated 3 ಜೂನ್ 2021, 12:48 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್ ಎರಡನೆ ಅಲೆ ತೀವ್ರತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಬಿಎಸ್‍ಇ 10 ಮತ್ತು 12ನೇ ತರಗತಿ ಪರೀಕ್ಷೆ ರದ್ದುಗೊಳಿಸಿರುವಂತೆ ರಾಜ್ಯ ಸರ್ಕಾರ ಕೂಡ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‍ಓ ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಆನ್‌ಲೈನ್‌ ಪ್ರತಿಭಟನೆ ನಡೆಸಲಾಯಿತು.

ಪರೀಕ್ಷೆ ಬಗೆಗಿನ ಗೊಂದಲ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಒತ್ತಡ ಹೇರುತ್ತದೆ. ಜೊತೆಗೆ, ಕೋವಿಡ್ ಸಾಂಕ್ರಾಮಿಕ ಇದೀಗ ಗ್ರಾಮಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆ ಸಹ ಹೆಚ್ಚುತ್ತಲೇ ಇದೆ. ಮುಂದಿನ ದಿನಗಳಲ್ಲಿ ಸರ್ಕಾರ ಪರೀಕ್ಷೆ ನಡೆಸಲು ನಿರ್ಧರಿಸಿದ್ದರೂ ಕೆಲವು ದಿನಗಳು ತರಗತಿ ನಡೆಸಿಯೇ ಪರೀಕ್ಷೆ ನಡೆಸಬೇಕು. ಮೂರನೇ ಅಲೆಯ ಅಪಾಯ ಇರುವುದರಿಂದ ತರಗತಿ ಅಥವಾ ಪರೀಕ್ಷೆ ನಡೆಸುವುದು ಕಷ್ಟಸಾಧ್ಯ. ಆದ್ದರಿಂದ ಪರೀಕ್ಷೆಗಳನ್ನು ರದ್ದುಗೊಳಿಸಿ, ಅನುಭವಿ ಶಿಕ್ಷಕರು ಹಾಗೂ ಶಿಕ್ಷಣ ತಜ್ಞರ ಸಲಹೆ ಮೇರೆಗೆ ಒಂದು ವೈಜ್ಞಾನಿಕ ಮೌಲ್ಯಮಾಪನ ಪದ್ಧತಿ ರಚಿಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪರೀಕ್ಷೆ ಬರೆಯದೇ ಇರುವ ಸಿಬಿಎಸ್‍ಇ ವಿದ್ಯಾರ್ಥಿಗಳಿಗೆಪ್ರಥಮ ಪಿಯು ಮತ್ತು ಎಂಜಿನಿಯರಿಂಗ್ ಸೇರಿದಂತೆ ಇತರ ಉನ್ನತ ಶಿಕ್ಷಣದ ದಾಖಲಾತಿಯಲ್ಲಿ ಹೆಚ್ಚುವರಿ ಲಾಭ ದೊರೆಯಲಿದೆ. ಇದು ರಾಜ್ಯದ ಪಠ್ಯಕ್ರಮದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗೆ ಸಂಕಷ್ಟ ಉಂಟುಮಾಡುತ್ತದೆ. ಸಿಇಟಿ ದಾಖಲಾತಿಯಲ್ಲಿ ಸಹ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಅನಾನುಕೂಲ ಎದುರಾಗುತ್ತದೆ ಎಂದು ಹೇಳಿದರು.

ಈ ಎಲ್ಲ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಆರೋಗ್ಯ ಮತ್ತು ವಿಧ್ಯಾಭ್ಯಾಸದ ಹಿತದೃಷ್ಟಿಯಿಂದ ಪರೀಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದು ರಾಜ್ಯದ ಬಹುಪಾಲು ವಿದ್ಯಾರ್ಥಿಗಳು, ಪೋಷಕರ ಮತ್ತು ಶಿಕ್ಷಕರ ಅಭಿಪ್ರಾಯವಾಗಿದ್ದು, ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‍ಓ ಜಿಲ್ಲಾ ಉಪಾಧ್ಯಕ್ಷ ಕಾವೇರಿ ರಜಪೂತ, ಮಲ್ಲಿಕಾರ್ಜುನ ಕೋರಿ, ಕೇತನ ಕೆ.ಸಿ. ಗಣೇಶ, ಆಕಾಶ, ಆದಿತ್ಯ, ರತ್ನಾ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT