ವಿಜಯಪುರ:ಜಿಲ್ಲೆಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿಖಾಸಗಿ ಆಸ್ಪತ್ರೆಗಳಲ್ಲಿ ಶೇ 50 ರಷ್ಟು ಹಾಸಿಗೆಗಳನ್ನು ಕಡ್ಡಾಯವಾಗಿ ಮೀಸಲಿಡುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಅವರು ಖಾಸಗಿ ವೈದ್ಯರಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಸುಮಾರು 11 ಆಸ್ಪತ್ರೆಯವರು ಕೂಡಿಕೊಂಡು ಒಟ್ಟು 400 ಹಾಸಿಗೆಗಳನ್ನು ಮೀಸಲಿಟ್ಟಿದ್ದು ಶ್ಲಾಘನೀಯ ಎಂದರು.

ಅತೀ ಶೀಘ್ರದಲ್ಲೇ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಸಾಕಷ್ಟು ಪ್ರಮಾಣದಲ್ಲಿ ಮಾಡಲಾಗುವುದು. 24X7 ವಾರ್ರೂಂ ಅನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಂದ್ರ ಕಾಪಸೆ ಸೇರಿದಂತೆ ಖಾಸಗಿ ಆಸ್ಪತ್ರೆಗಳ ವೈದ್ಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.