ಬುಧವಾರ, ಮೇ 12, 2021
18 °C
ಮೂರು ದಿನ ಪೂರೈಸಿದ ಸಾರಿಗೆ ನೌಕರರ ಮುಷ್ಕರ

ನಿವೃತ್ತ ಚಾಲಕ, ನಿರ್ವಾಹಕರಿಗೆ ಆಹ್ವಾನ; ಖಾಸಗಿ ಬಸ್‌ಗಳ ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ಮೂರು ದಿನ ಪೂರೈಸಿದ್ದು, ಜಿಲ್ಲೆಯಾದ್ಯಂತ ಸಾರಿಗೆ ಬಸ್‌ಗಳ ಸಂಚಾರ ಸ್ಥಗಿತವಾಗಿತ್ತು.

ಪ್ರಯಾಣಿಕರಿಗೆ ಬದಲಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಮುಂದಾಗಿರುವ ಸಾರಿಗೆ ಅಧಿಕಾರಿ ವರ್ಗ ಸ್ವತ: ಮುಂದೆ ನಿಂತು ನಗರದ ಕೇಂದ್ರ ಬಸ್‌ ನಿಲ್ದಾಣದಿಂದಲೇ ಖಾಸಗಿ ಬಸ್‌, ಇತರೆ ವಾಹನಗಳ ಕಾರ್ಯಾಚರಣೆಗೆ ಅವಕಾಶ ಕಲ್ಪಿಸಿದರು. ಹುಬ್ಬಳ್ಳಿ, ಅಥಣಿ, ಜಮಖಂಡಿ ಸೇರಿದಂತೆ ವಿವಿಧ ನಗರಗಳಿಗೆ ಖಾಸಗಿ ಬಸ್‌ಗಳು ಓಡಿದವಾದರೂ ಮುಷ್ಕರದ ಹಿನ್ನೆಲೆಯಲ್ಲಿ ಬೆರಳೆಣಿಕೆ ಪ್ರಯಾಣಿಕರು ಮಾತ್ರ ಬಸ್‌ಗಳಲ್ಲಿ ಸಂಚರಿಸಿದರು. ಪೊಲೀಸ್‌ ಭದ್ರತೆಯನ್ನು ಒದಗಿಸಿದ್ದರು. 

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಸಾರಿಗೆ ಇಲಾಖೆಯ ನಿವೃತ್ತ ಚಾಲಕ, ನಿರ್ವಾಹಕರನ್ನು ತಾತ್ಕಾಲಿಕವಾಗಿ ಕೆಲಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು, ಈ ಸಂಬಂಧ 53 ಚಾಲಕ ಮತ್ತು 18 ನಿರ್ವಾಹಕರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಕರೆಪತ್ರವನ್ನು ಕಳುಹಿಸಿ ಹಾಗೂ ಷರತ್ತುಗಳನ್ನು ತಿಳಿಸಿ ಅವರ ಮನವೊಲಿಸುವ ಕಾರ್ಯ ಮಾಡಲಾಗಿದೆ. ನಾಳೆ ಕರ್ತವ್ಯಕ್ಕೆ ಹಾಜರಾಗುವ ಸಾಧ್ಯತೆ ಇದೆ ಎಂದು ವಿಜಯಪುರ ವಿಭಾಗದ ವಿಭಾಗೀಯ ಸಂಚಾಲಕ ನಾರಾಯಣಪ್ಪ ಕುರುಬರ ‘ಪ್ರಜಾವಾಣಿ’ಗೆ ತಿಳಿಸಿದರು.

ಶುಕ್ರವಾರ 194 ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿದ್ದು, ಶ್ರೀಶೈಲಕ್ಕೆ 50 ಬಸ್ಸುಗಳನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಜಿಲ್ಲೆಯೊಳಗೆ 47 ಬಸ್‌ಗಳು ಕಾರ್ಯಾಚರಣೆ ನಡೆಸಿವೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು