ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರ ಪಟ್ಟಿ ಪರಿಷ್ಕರಣೆ; ಜವಾಬ್ದಾರಿ ಅಗತ್ಯ

ಸ್ವೀಪ್ ಸಮಿತಿ ಸದಸ್ಯರಿಗೆ ಜಿ. ಪಂ. ಸಿಇಒ ರಾಹುಲ್ ಶಿಂಧೆ ಸೂಚನೆ
Last Updated 23 ನವೆಂಬರ್ 2022, 15:03 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ಎಲ್ಲ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊಂಡು ಮತದಾನದಿಂದ ವಂಚಿತವಾಗದಂತೆ ನೋಡಿಕೊಳ್ಳಲು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿಬುಧವಾರ ಜಿಲ್ಲೆಯ ಎಲ್ಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಹಶೀಲ್ದಾರರೊಂದಿಗೆ ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಬರುವ 2023ರ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಮತದಾರ ಜನಸಂಖ್ಯಾ ಅನುಪಾತ (EP Ratio) ಲಿಂಗಾನುಪಾತ, (Gender Ratio), ಮತದಾನ ಅನುಪಾತ (Voter Turnout) ಗಳ ಕುರಿತು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು.

ಅರ್ಹ ಅಂಗವಿಕಲ ಮತದಾರರನ್ನು ಗುರುತಿಸಿ ಮತಪಟ್ಟಿಯಲ್ಲಿ ನೋಂದಾಯಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಅರ್ಹ ಮತದಾರ ಮತದಾನದಿಂದ ವಂಚಿತವಾಗದಂತೆ ನೋಡಿಕೊಳ್ಳಲು ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಿ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಕೆ. ಗೋಠೆ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ ಡಂಬಳ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿರಹಟ್ಟಿಮಠ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಗಲಿ, ಪ್ರಥಮ ದರ್ಜೇ ಪದವಿ ಕಾಲೇಜಿನ ಇಎಲ್‍ಸಿ ಸಂಚಾಲಕ ಡಾ.ಬಿ. ಎಂ. ಕೋರಬು, ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT