ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಂ ಮಹಿಳೆಯರಿಗೆ ಮಾತ್ರವಲ್ಲ, ಎಲ್ಲರಿಗೂ ಕ್ಯಾನ್ಸರ್‌ ಸಹಾಯಧನ ನೀಡಿ: ಯತ್ನಾಳ್

ಮುಖ್ಯಮಂತ್ರಿ ಬೊಮ್ಮಾಯಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯ
Last Updated 25 ಆಗಸ್ಟ್ 2021, 11:45 IST
ಅಕ್ಷರ ಗಾತ್ರ

ವಿಜಯಪುರ:ಕ್ಯಾನ್ಸರ್ ಪೀಡಿತ ಮುಸ್ಲಿಂ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ₹ 1 ಲಕ್ಷಸಹಾಯಧನ ಯೋಜನೆ ಹಿಂಪಡೆದು, ಎಲ್ಲ ಜಾತಿ, ಜನಾಂಗ, ಧರ್ಮದವರಿಗೆ ಈ ಯೋಜನೆಯನ್ನು ಜಾರಿಗೆ ತರಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಪತ್ರ ಬರೆದಿರುವ ಅವರು,ನಮ್ಮ ಬಿ.ಜೆ.ಪಿ ಸರ್ಕಾರ ಈ ರೀತಿಯ ಮುಸ್ಲಿಂ ತುಷ್ಟೀಕರಣ, ತಾರತಮ್ಯ ಮಾಡುವುದು ಸರಿಯಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದ್ದಾರೆ.

ಕ್ಯಾನ್ಸರ್‌ ಎಂಬುದು ಯಾವುದೇ ಜಾತಿ ನೋಡಿ ಬರುವುದಿಲ್ಲ. ಇದು ಎಲ್ಲ ಬಡ ಜಾತಿ, ಜನಾಂಗ, ಧರ್ಮದವರಿಗೂ ಬರುತ್ತದೆ. ಇದರಿಂದ ಬಿ.ಪಿ.ಎಲ್ ಕಾರ್ಡ್‌ ಹೊಂದಿದ ಬಡ ಜನರಿಗೆ ಸರ್ಕಾರದ ಸೌಲಭ್ಯ ದೊರಕಿಸಿ ಕೊಡಬೇಕು ಎಂದಿದ್ದಾರೆ.

ರಾಜ್ಯ ಸರ್ಕಾರ ತಕ್ಷಣ ಈ ತಾರತಮ್ಯವನ್ನು ಬದಲಾಯಿಸಬೇಕು.ಕ್ಯಾನ್ಸರ್ ಪೀಡಿತ ಪ್ರತಿಯೊಬ್ಬ ಪ್ರಜೆಗೂ ಇದರ ಲಾಭ ಲಭಿಸಬೇಕೇ ಹೊರತು, ಕೇವಲ ಮುಸ್ಲಿಮರಿಗಲ್ಲ. ಇಲ್ಲದಿದ್ದರೆ ನಮ್ಮ ಸರ್ಕಾರಕ್ಕೂ ಇತರೇ ಪಕ್ಷಗಳ ಸರ್ಕಾರಕ್ಕೂ ವ್ಯತ್ಯಾಸವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT