ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಭೀಕರ ರಸ್ತೆ ಅಪಘಾತ: ನಾಲ್ವರು ಸಾವು

Published 13 ಏಪ್ರಿಲ್ 2024, 4:01 IST
Last Updated 13 ಏಪ್ರಿಲ್ 2024, 4:01 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಅರ್ಜುಣಗಿ ಬಳಿ ಕಾರು ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಜಯಪುರ ನಗರದ ಅರ್ಜುನ ಕುಶಾಲಸಿಂಗ್ ರಜಪೂತ (32) ರವಿನಾಥ ಸುನಿಲಾಲ್ ಪತ್ತಾರ (52) ಪುಷ್ಪಾ ರವಿನಾಥ ಪತ್ತಾರ ( 40) ಮೇಘರಾಜ ಅರ್ಜುನಸಿಂಗ್ ರಜಪೂತ(12) ಸಾವಿಗೀಡಾಗಿದ್ದಾರೆ.

ವಿಜಯಪುರದಿಂದ ಜಮಖಂಡಿಯ ದೇವಸ್ಥಾನಕ್ಕೆ ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು.

ಜಮಖಂಡಿಯಿಂದ ಸಿಮೆಂಟ್ ತುಂಬಿದ್ದ ಲಾರಿ ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ನುಜ್ಜುಗುಜ್ಜಾದ ಕಾರಿನೊಳಗಿದ್ದ ಶವಗಳನ್ನು ಹೊರತೆಗೆಯಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನೆವಣೆ ಹಾಗೂ ಬಬಲೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT