ವಿಜಯಪುರ: ತಾಲ್ಲೂಕಿನ ಅರಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಟಾಟಾ ಏಸ್ ಹಾಗೂ ಗೂಡ್ಸ್ ಲಾರಿಯ ನಡುವೆ ಡಿಕ್ಕಿಯಾಗಿ, ಟಾಟಾ ಏಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಲೋಣಿ ಗ್ರಾಮದ ಬುದ್ದಯ್ಯ ರಾಚಯ್ಯ ಹಿರೇಮಠ (70), ಪ್ರತೀಕ್ ರಾಚಯ್ಯ ಹಿರೇಮಠ (27), ಸಿದ್ರಾಮ ದಾನಯ್ಯ ಹಿರೇಮಠ (22) ಎಂದು ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.