ವಿಜಯಪುರ: ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ರಸ್ತೆ ಅಪಘಾತ ತಡೆಗೆ ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಮುಖ್ಯ ರಸ್ತೆ ಸೇರಿದಂತೆ ಅಪಘಾತ ವಲಯಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ಸಂಬಂಧಿಸಿದ ಇಲಾಖೆಗಳು ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಸೂಕ್ತ ಗುರುತು ಫಲಕ, ಅಗತ್ಯವಿದ್ದಲ್ಲಿ ಬ್ಯಾರಿಕೇಡ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಅಪಘಾತಗಳು ನಡೆಯದಂತೆ ನೋಡಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.

ಅವಶ್ಯವಿರುವ ಕಡೆ ಸೈನ್ ಬೋರ್ಡ್, ಬ್ಯಾರಿಕೇಡ್ ಹಾಕಬೇಕು. ರಸ್ತೆ ಅಭಿವೃದ್ಧಿ ಸಂದರ್ಭದಲ್ಲಿ ಈ ಎಲ್ಲ ಅಂಶಗಳು ಒಳಗೊಳ್ಳುವಂತೆ ನೋಡಿಕೊಳ್ಳಬೇಕು. ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಆಯೋಜಿಸುವ ಮೂಲಕ ಜನರಲ್ಲಿ ಸೂಕ್ತ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ರಸ್ತೆಗಳಲ್ಲಿ ಅಳವಡಿಸಲಾದ ಗುರುತು ಫಲಕಗಳು ಹಾಗೂ ರಸ್ತೆ ನಿಯಮಗಳ ಪಾಲನೆಗೆ ವಾಹನ ಸವಾರರಲ್ಲಿ ಸೂಕ್ತ ತಿಳಿವಳಿಕೆ ಮೂಡಿಸಬೇಕು. ಕಡ್ಡಾಯವಾಗಿ ನಿಯಮಗಳ ಪಾಲನೆ ಕುರಿತು ಜಾಗೃತಿ ಮೂಡಿಸಬೇಕು. ವಾಹನ ನಂಬರ್ ಪ್ಲೇಟ್ ಸ್ಪಷ್ಟವಾಗಿ ಕಾಣುವಂತಿರಬೇಕು. ನೈಟ್ ವಿಜನ್, ಸಿಸಿಟಿವಿ ಕ್ಯಾಮೆರಾ ಅಳವಡಿಸಿ ನಿಗಾ ಇರಿಸಿದ್ದಲ್ಲಿ ಅಪಘಾತ ತಡೆಗೆ ಅನುಕೂಲವಾಗುವುದರಿಂದ ಆದ್ಯತೆಯ ಮೇಲೆ ಈ ಕಾರ್ಯವನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂ ಬಾಬಾ ಮುದ್ದೇಬಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸಿ.ಎಸ್.ಪೊಲೀಸ್ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

ಜಿಲ್ಲೆಯಲ್ಲಿರುವ ಅಪಘಾತ ವಲಯಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅಲ್ಲಿ ಕೈಗೊಳ್ಳಬಹುದಾದ ಅಗತ್ಯ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿ ಅಪಘಾತ ತಡೆಗೆ ಕೈಗೊಂಡ ಕ್ರಮಗಳ ಕುರಿತು ಮುಂದಿನ ಸಭೆಯಲ್ಲಿ ವರದಿ ಸಲ್ಲಿಸಬೇಕು.
–ಡಾ.ಆನಂದ ಕೆ., ಜಿಲ್ಲಾಧಿಕಾರಿ

‘ಮಾದಕ ವ್ಯಸನ; ಜಾಗೃತಿ ಮೂಡಿಸಿ’

ವಿಜಯಪುರ: ಯುವ ಜನಾಂಗ ದುಶ್ಚಟಗಳಿಗೆ ಬಲಿಯಾದಂತೆ ನೋಡಿಕೊಳ್ಳಲು ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲು ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಸಹಕಾರದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಮಾದಕ ವಸ್ತು ನಿರ್ಮೂಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿ ನಿಲಯಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ-ಅರಿವು ಮೂಡಿಸಬೇಕು’ ಎಂದರು.

ಜಿಲ್ಲೆಯ ಎಲ್ಲ ಔಷಧ ಅಂಗಡಿಗಳಲ್ಲಿ ‘ವೈದ್ಯರ ನಿರ್ದೇಶನವಿಲ್ಲದೇ ಔಷಧ ಮಾರಾಟ ನಿಷೇಧ’ ಕುರಿತು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಔಷಧಾಲಯಗಳಿಗೆ ತಿಳಿವಳಿಕೆ ನೀಡಬೇಕು. ಔಷಧ ಅಂಗಡಿಗಳಲ್ಲಿ ಮಾದಕ ಅಂಶಗಳುಳ್ಳ ಔಷಧಗಳನ್ನು ವೈದ್ಯರ ಅನುಮತಿ ಇಲ್ಲದೇ ಮಾರಾಟ ಮಾಡದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಬೆಳೆ ಬೆಳೆಯದಂತೆ ಕಾನೂನು ಅರಿವು ಜಾಗೃತಿ ಮೂಡಿಸಬೇಕು. ಎಲ್ಲ ಪಬ್ ಹಾಗೂ ಬಾರ್ ಆವರಣದಲ್ಲಿ ಎನ್ಸಿಬಿ ಸೂಚನಾ ಫಲಕಗಳನ್ನು ಪ್ರದರ್ಶಿಸುವಂತೆ ನೋಡಿಕೊಳ್ಳಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.