ಲೋಣಿ(ಬಿಕೆ) ಗ್ರಾಮದಿಂದ ಚಡಚಣ ವರೆಗಿನ ಸುಮಾರು 10 ಕಿ.ಮೀ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿರುವುದರಿಂದ ಬರಡೋಲ ಮಾರ್ಗವಾಗಿ ಸುಮಾರು 17 ಕಿ.ಮೀ ಸುತ್ತುವರೆದು ಬರುವ ಪರಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆ ದುರಸ್ತಿಗೊಳಿಸಬೇಕು
-ಜಗದೀಶ ಜಿತ್ತಿ ಗ್ರಾ.ಪಂ.ಮಾಜಿ ಸದಸ್ಯ ಲೋಣಿ(ಬಿ.ಕೆ)
ಚಡಚಣ ತಾಲ್ಲೂಕಿನ ಬಹುತೇಕ ರಸ್ತೆಗಳೆಲ್ಲ ಕಿತ್ತು ಹೋಗಿವೆ. ವಾಹನ ಚಾಲಕರು ಗುಂಡಿ ತಪ್ಪಿಸಲು ಅಡ್ಡಾದಿಡ್ಡಿಯಾಗಿ ಸಂಚರಿಸುವುದರಿಂದ ಅಫಗಾತಗಳು ಹೆಚ್ಚುತ್ತಿವೆ
ರಾಜು ಗೋರೆ. ಶಿರಾಡೋಣ
ಚಡಚಣ ಪಟ್ಟಣಕ್ಕೆ ಸಂಪರ್ಕಿಸುವ ಹದಗೆಟ್ಟ ರಸ್ತೆಗಳ ದುರಸ್ಥಿ ಡಾಂಬರೀಕರಣಕ್ಕಾಗಿ ಕ್ರೀಯಾಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮಂಜೂರಾತಿ ದೊರೆತ ತಕ್ಷಣ ರಸ್ತೆಗಳ ದುರಸ್ತೆ ಕೈಗೊಳ್ಳಲಾಗುವುದು.