ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ: ಚಡಚಣದಲ್ಲಿ ರೌಡಿ ಶೀಟರ್‌ ಅಶೋಕ ಹತ್ಯೆ

Published 16 ಜೂನ್ 2024, 19:51 IST
Last Updated 16 ಜೂನ್ 2024, 19:51 IST
ಅಕ್ಷರ ಗಾತ್ರ

ಚಡಚಣ (ವಿಜಯಪುರ ಜಿಲ್ಲೆ): ಪಟ್ಟಣದ ಹೊರ ವಲಯದ ನೀವರಗಿ ರಸ್ತೆಯಲ್ಲಿ ರೌಡಿ ಶೀಟರ್‌ ಅಶೋಕ ಮಲ್ಲಪ್ಪ ಗಂಟಗಲ್ಲಿ ಎಂಬಾತನನ್ನು ಭಾನುವಾರ ಮಧ್ಯಾಹ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ನೀವರಗಿ ರಸ್ತೆಗೆ ಹೊಂದಿಕೊಂಡಿರುವ ತನ್ನ ತೋಟದ ಮನೆಯಿಂದ ಪಟ್ಟಣದತ್ತ ಬೈಕ್‌ ಮೇಲೆ ಬರುತ್ತಿದ್ದಾಗ, ಹಿಂಬದಿಯಿಂದ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಬೈಕ್‌ ನಿಂದ ಬಿದ್ದಿದ್ದ ಆತನನ್ನು ಅಲ್ಲಿದ್ದ ಜನರು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸುತ್ತಿದ್ದಂತೆ ಆತ ಮೃತ
ಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

‘ಸುಮಾರು 15 ವರ್ಷಗಳ ಹಿಂದೆ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲು ಸೇರಿದ್ದ ಅಶೋಕ ಎರಡು ವರ್ಷಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಹಳೆಯ ವೈಷಮ್ಯದಿಂದ ಹತ್ಯೆಯಾಗಿದೆ’ ಎಂದು ಪೊಲೀಸರು ತಿಳಿಸಿದ್ದು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT