ಚಡಚಣ (ವಿಜಯಪುರ): ಸಮೀಪದ ಝಳಕಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಜಾಪುರದಿಂದ ಸೋಲಾಪುರಕ್ಕೆ ತೆರಳುತ್ತಿರುವ ಲಾರಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹54.49 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚಡಚಣ ಸಿಪಿಐ ಸಾಹೇಬಗೌಡ ಪಾಟೀಲ ತಿಳಿಸಿದ್ದಾರೆ.
ಲಾರಿ ಚಾಲಕ ಹಾಗೂ ಕ್ಲೀನರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
₹9.40 ಲಕ್ಷ ವಶ: ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 218ರ ಕೃಷ್ಣಾ ನದಿ ಸೇತುವೆ ಬಳಿ ಚೆಕ್ ಪೋಸ್ಟ್‌ನಲ್ಲಿ ಕಳೆದ ಎರಡು ದಿನಗಳಲ್ಲಿ ದಾಖಲೆಗಳಿಲ್ಲದೇ ಒಯ್ಯಲಾಗುತ್ತಿದ್ದ ಒಟ್ಟು ₹9.40 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಭಾನುವಾರ, ಬಸ್‌ನಲ್ಲಿ ವ್ಯಕ್ತಿಯೊಬ್ಬರು ದಾಖಲೆಗಳಿಲ್ಲದೇ ಒಯ್ಯುತ್ತಿದ್ದ ₹4.40 ಲಕ್ಷ ನಗದು ಹಾಗೂ ದಾಖಲೆಗಳಿಲ್ಲದೇ ಕಾರಿನಲ್ಲಿ ಒಯ್ಯಲಾಗುತ್ತಿದ್ದ ₹5 ಲಕ್ಷ ಹಣವನ್ನು ಸೋಮವಾರ ವಶಪಡಿಸಿಕೊಂಡಿದ್ದಾರೆ.
ಗೋವಾ ಮದ್ಯ ವಶ (ಜೊಯಿಡಾ ವರದಿ): ಗೋವಾದಿಂದ ಅಕ್ರಮವಾಗಿ ಸೀಬರ್ಡ್ ಬಸ್ ನಲ್ಲಿ ಬೆಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 319 ಲೀಟರ್ ಮದ್ಯವನ್ನು ಭಾನುವಾರ ತಡರಾತ್ರಿ ತಾಲ್ಲೂಕಿನ ಅನಮೋಡ ಅಬಕಾರಿ ತನಿಖಾ ಠಾಣೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು ಚಾಲಕ ಪರಶು ರಾಮ ಕುರಿ, ಕುಮಾರ್ ಹಾಗೂ ಮನು ಕೆ. ಬಿ ಎಂಬುವವರನ್ನು ಬಂಧಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.