ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಬಿಜೆಪಿ ಸಭೆಯಲ್ಲಿ ಯತ್ನಾಳ ಬೆಂಬಲಿಗರಿಂದ ಗದ್ದಲ: ಸಭೆಯಿಂದ ಹೊರನಡೆದ ನಾಯಕರು

Published 26 ಜೂನ್ 2023, 13:23 IST
Last Updated 26 ಜೂನ್ 2023, 13:23 IST
ಅಕ್ಷರ ಗಾತ್ರ

ವಿಜಯಪುರ: ನಗರದಲ್ಲಿ ಸೋಮವಾರ ಸಂಜೆ ಆಯೋಜಿಸಲಾಗಿದ್ದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲಿಗರು ಅಡ್ಡಿ ಪಡಿಸಿ, ಗದ್ದಲ ಎಬ್ಬಿಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಬಿಜೆಪಿ ನಾಯಕರು ಕಾರ್ಯಕ್ರಮ ಉದ್ಘಾಟನೆಗೆ ಮುಂದಾದಾಗ ಯತ್ನಾಳ ವೇದಿಕೆಗೆ ಬರುವವರೆಗೂ ಕಾರ್ಯಕ್ರಮ ಉದ್ಘಾಟಿಸಬಾರದು ಎಂದು ಅಡ್ಡಿಪಡಿಸಿದರು.

ಬಿ ಆರ್ ಪಿ, ಬಿ ಆರ್ ಪಿ ಎಂದು ಘೋಷಣೆ ಕೂಗಿದರು. ಚುನಾವಣೆಯಲ್ಲಿ ಯತ್ನಾಳ ಅವರಿಗೆ ದ್ರೋಹ ಬಗೆದವರನ್ನು ಸಭೆಯಿಂದ ಹೊರಹಾಕಿ ಎಂದು ಒತ್ತಾಯಿಸಿದರು.

ವೇದಿಕ ಮೇಲೆ ಉಪಸ್ಥಿತರಿದ್ದ ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಮಾಜಿ ಸಚಿವ ಮುರುಗೇಶ ನಿರಾಣಿ ವಿರುದ್ದ ಧಿಕ್ಕಾರ ಹಾಕಿದರು.

ಗದ್ದಲದ ವಾತಾವರಣದಿಂದ ಬೇಸರಗೊಂಡ ಸಂಸದ ರಮೇಶ ಜಿಗಜಿಣಗಿ,ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಸಭೆಯಿಂದ ಹೊರನಡೆದರು.

ಯತ್ನಾಳ ಬೆಂಬಲಿಗರನ್ನು ತಡೆಯಲು ಪೊಲೀಸರು, ಬಿಜೆಪಿ ಮುಖಂಡರು ಹರಸಾಹಸ ಪಟ್ಟರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲವನ್ನೂ ಮೌನವಾಗಿ ನೋಡುತ್ತಾ ವೇದಿಕೆಯಲ್ಲಿ ಕುಳಿತಿದ್ದರು. ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಅಭಯ ಪಾಟೀಲ, ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ ವೇದಿಕೆಯಲ್ಲೇ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT