ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣಗೆ ನಮನ

Last Updated 15 ಆಗಸ್ಟ್ 2021, 13:53 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮುಜರಾಯಿ, ವಕ್ಫ್ ಹಾಗೂ ಹಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ರಾಯಣ್ಣನ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಅರ್ಪಿಸಿದರು.

ಕಿತ್ತೂರಾಣಿ ಚನ್ನಮ್ಮಳ ಬಲಗೈ ಭಂಟನಾಗಿದ್ದ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ತಂದು ಕೊಟ್ಟ ನಿಷ್ಠಾವಂತ ನಾಯಕನ ಜನ್ಮದಿನವನ್ನು ಸ್ವಾತಂತ್ರ್ಯ ದಿನಾಚರಣೆದಂದು ಆಚರಿಸುವುದು ‌ಹೆಮ್ಮೆಯ ಸಂಗತಿ ಎಂದರು.

ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ, ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಹುಲಜಂತಿ ಮಠದ ವಿಜೇಂದ್ರ ಮಾಳಿಂಗರಾಯ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈರಣ್ಣ ಆಶಾಪುರ, ಸಮಾಜದ ಮುಖಂಡರಾದಸುಜಾತಾ ಕಳ್ಳಿಮನಿ, ರಾಜು ಕಂಬಾಗಿ, ಭೀಮರಾವ್ ಜಿಗಜಿಣಗಿ, ಸೋಮನಗೌಡ ಕಲ್ಲೂರ್, ದೇವೇಂದ್ರ ಮಿರೇಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT