ಸೋಮವಾರ, ಆಗಸ್ಟ್ 2, 2021
27 °C

ವಿಜಯಪುರ | ಅಕ್ರಮ ಮರಳು ಸಾಗಣೆ ಲಾರಿಯನ್ನು ಪೊಲೀಸರಿಗೆ ಒಪ್ಪಿಸಿದ ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ನಾಗಠಾಣ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚೌವ್ಹಾಣ್ ಗುರುವಾ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ತಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಜಯಪುರ ನಗರದ ಹೊರ ಭಾಗದಲ್ಲಿ ಸೊಲ್ಲಾಪುರದತ್ತ ಹೊರಟಿದ್ದ ಮರಳು ತುಂಬಿದ್ದ ಲಾರಿಯನ್ನು ಶಾಸಕರು ತಡೆದು ಪರಿಶೀಲಿಸಿದಾಗ ಮರಳು ಸಾಗಾಟ ಮಾಡುವ ಹಳೆಯ ಪಾಸ್ ಹೊಂದಿರುವುದು ಬೆಳಕಿಗೆ ನಂದಿದೆ.

ಕಳೆದ ಜೂನ್ 24ರ ಪಾಸ್ ಹೊಂದಿದ್ದ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅಕ್ರಮ ಮರಳು ಸಾಗಾಟ ಮಾಡುವ ಲಾರಿಯನ್ನು ಆದರ್ಶ ನಗರ ಪೊಲೀಸರ ಸುಪರ್ದಿಗೆ ಶಾಸಕರು ನೀಡಿದರು.

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವ್ಯಾಪಕವಾಗಿ ನಡೆದಿದೆ ಕೂಡಲೇ ಸರ್ಕಾರ ವಿಜಯಪುರ ಜಿಲ್ಲೆಯಲ್ಲಿನ ಅಕ್ರಮ ಮರಳುಗಾರಿಕೆ ತಡೆಯಬೇಕೆಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು