ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ ಹರನಾಳ ಬಿಜೆಪಿ ಸೇರ್ಪಡೆ

Published 13 ಜನವರಿ 2024, 15:34 IST
Last Updated 13 ಜನವರಿ 2024, 15:34 IST
ಅಕ್ಷರ ಗಾತ್ರ

ಸಿಂದಗಿ: ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಸಂತೋಷ ಹರನಾಳ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು, ಸಂತೋಷ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಸಿಂದಗಿ ಮಾಜಿ ಶಾಸಕ ರಮೇಶ ಭೂಸನೂರ, ಬಿಜೆಪಿ ಮುಖಂಡರಾದ ಸಂತೋಷ ಪಾಟೀಲ ಡಂಬಳ, ಮಲ್ಲೂ ಸಾವಳಸಂಗ, ಗುರು ತಳವಾರ, ಮಡಿವಾಳಪ್ಪಗೌಡ ಬಿರಾದಾರ ಉಪಸ್ಥಿತರಿದ್ದರು.

ಸಂತೋಷ ಹರನಾಳ ಮಾತನಾಡಿ, ‘ಸಿಂದಗಿ ತಾಲ್ಲೂಕಿನಲ್ಲಿ ಜೆಡಿಎಸ್‌ಗೆ ಅಸ್ತಿತ್ವವೇ ಇಲ್ಲವಾಗಿದೆ. ಪಕ್ಷ ತ್ಯಜಿಸುವುದು ಅನಿವಾರ್ಯವಾಯಿತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ನಾಯಕತ್ವ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿರುವೆ. ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಇನ್ನಷ್ಟು ಬಲಗೊಳ್ಳಲಿದೆ. ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗುವುದು ನಿಶ್ಚಿತ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT