ವಿಜಯಪುರ: ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಕುರಿತಾಗಿ ದತ್ತಾಂಶ ಸಂಗ್ರಹಣಾ ಸಮೀಕ್ಷೆ ಕಾರ್ಯ ಪಾರದರ್ಶಕವಾಗಿ, ನಿಖರವಾಗಿ ಮಾಹಿತಿ ಸಂಗ್ರಹಿಸಬೇಕು. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಎಚ್ಚರಿಕೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿಗಳ ದತ್ತಾಂಶ ಶೇಖರಣಾ ಸಮಿಕ್ಷೆ ಸಭೆಯಲ್ಲಿ ಅವರು ಮಾತನಾಡಿದರು.

ಸೋಮವಾರದಿಂದ ಆರಂಭವಾಗಿರುವ ಸಮೀಕ್ಷಾ ಕಾರ್ಯ ಮೇ 17ರವರೆಗೆ ಜಿಲ್ಲೆಯ ಪರಿಶಿಷ್ಟ ಜಾತಿಗಳ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ಪಾರದರ್ಶಕವಾಗಿ ನಿಯಮಗಳನ್ವಯ ಯಾವುದೇ ಗೊಂದಲ ಮಾಡಿಕೊಳ್ಳದೆ ಯಶಸ್ವಿಯಾಗಿ ಕೈಗೊಳ್ಳುವಂತೆ ಹೇಳಿದರು.

ಮೂರು ಹಂತಗಳಲ್ಲಿ ಸಮೀಕ್ಷೆ ಕಾರ್ಯ ನಡೆಯಲಿದೆ. ಮೇ 5 ರಿಂದ 17 ರವರೆಗೆ ಪರಿಶಿಷ್ಟ ಜಾತಿಯ ಮನೆ-ಮನೆಗೆ ಭೇಟಿ ನೀಡುವ ಮೂಲಕ, ಮೇ 19 ರಿಂದ 21 ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳ ಮೂಲಕ ಸಮೀಕ್ಷೆ ನಡೆಸಲಾಗುವುದು. ಮೇ 19 ರಿಂದ 23ರ ವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಸಹಾಯವಾಣಿ ಸಂಖ್ಯೆ 08352-255244 ಸಂಪರ್ಕಿಸಬಹುದಾಗಿದೆ ಎಂದರು.

ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾಸ್ಟರ್ ಟ್ರೇನರಗಳ ಮೂಲಕ ಸಮರ್ಪಕವಾಗಿ ತರಬೇತಿ ನೀಡಲಾಗಿದೆ. ಗಣತಿದಾರರು ಪ್ರತಿ ಮನೆ-ಮನೆಗೆ ಭೇಟಿ ನೀಡಿ ನಿಖರ ಮಾಹಿತಿ ಸಂಗ್ರಹಿಸಬೇಕು, ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಕುರಿತಂತೆ ಗ್ರಾಮ ಮಟ್ಟದಲ್ಲಿ ಡಂಗೂರ ಸಾರುವ ಮೂಲಕ ಜಿಲ್ಲೆಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು.

ಬಿಲ್ಕಲೆಕ್ಟರ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಮೀಕ್ಷೆದಾರರರೊಂದಿಗೆ ಹಾಜರಿದ್ದು ಸಮೀಕ್ಷಾ ಕಾರ್ಯಕ್ಕೆ ಸಹಕಾರ ನೀಡುವಂತೆಯೂ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಾಹನಗಳ ಮೂಲಕ ಪ್ರಚಾರ ಕೈಗೊಳ್ಳಬೇಕು. ಮಹಾನಗರ ಪಾಲಿಕೆ ಆಯುಕ್ತರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಈ ಸಮೀಕ್ಷೆ ಕಾರ್ಯಗಳಿಗೆ ಈಗಾಗಲೇ ನೇಮಕ ಮಾಡಲಾದ ನೋಡಲ್ ಅಧಿಕಾರಿಗಳು ಆಯಾ ತಾಲ್ಲೂಕು ಮಟ್ವದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವ ಮೂಲಕ ನಿಗದಿತ ಅವಧಿಯಲ್ಲಿ ಸಮೀಕ್ಷೆ ಕಾರ್ಯ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಯಾವುದೇ ಕುಟುಂಬ ಸಮೀಕ್ಷೆಯಿಂದ ಕೈ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು. ಈ ಕಾರ್ಯಕ್ಕೆ ಬೇಕಾದ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಮೀಕ್ಷೆ ಕಾರ್ಯಕ್ಕಾಗಿ ನಿಯೋಜಿತರು ಪರಸ್ಪರ ಸಮನ್ವಯತೆ ಹಾಗೂ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.