ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸಿಗರನ್ನು ಸೆಳೆಯಲು ಸೀ–ಪ್ಲೇನ್‌ ಹಾರಾಟಕ್ಕೆ ಯೋಜನೆ: ಸಿ.ಪಿ. ಯೋಗೀಶ್ವರ್‌

Last Updated 29 ಜೂನ್ 2021, 13:40 IST
ಅಕ್ಷರ ಗಾತ್ರ

ವಿಜಯಪುರ: ದೇಶ, ವಿದೇಶದ ಪ್ರವಾಸಿಗರು ರಾಜ್ಯದ ಪ್ರವಾಸಿ ತಾಣಗಳಿಗೆ ಸುಲಭವಾಗಿ ಬಂದುಹೋಗಲು ಅನುಕೂಲವಾಗುವಂತೆ ಆಲಮಟ್ಟಿ, ತುಂಗಭದ್ರಾ, ಲಿಂಗನಮಕ್ಕಿ, ಕೆಆರ್‌ಎಸ್‌ ಜಲಾಶಯದ ಹಿನ್ನೀರು ಹಾಗೂ ಮಂಗಳೂರು ಮತ್ತು ಕಾರವಾರದಲ್ಲಿ ಸೀ–ಪ್ಲೇನ್‌ ಹಾರಾಟಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್‌ ಹೇಳಿದರು.

ವಿಜಯಪುರ ನಗರದಲ್ಲಿ ಮಂಗಳವಾರ ಪ್ರವಾಸೋದ್ಯಮ ಇಲಾಖೆಯಿಂದ ₹ 5 ಕೋಟಿ ಮೊತ್ತದಲ್ಲಿ ಕೈಗೊಂಡಿರುವ ಐತಿಹಾಸಿಕ ಸ್ಮಾರಕ ಆನಂದ್‌ ಮಹಲ್‌ ನವೀಕರಣ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

25ರಿಂದ 30 ಪ್ರವಾಸಿಗರು ಪ್ರಯಾಣಿಸುವ ಲಘು ವಿಮಾನಗಳು ಜಲಾಶಯದ ಹಿನ್ನೀರು ಮತ್ತು ಸಮುದ್ರದಲ್ಲಿ ಇಳಿಯಲು ಮತ್ತು ಹಾರಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ. ಗೋವಾಕ್ಕೆ ಬರುವ ಪ್ರವಾಸಿಗರನ್ನು ಈ ಮೂಲಕ ರಾಜ್ಯದ ಪ್ರವಾಸಿ ತಾಣಗಳಿಗೆ ಆಕರ್ಷಿಸಲು ಅನುಕೂಲವಾಗಲಿದೆ ಎಂದರು.

ಸೀ–ಪ್ಲೇನ್‌ ಯೋಜನೆ ಜಾರಿ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು, ಉಡಾನ್ ಯೋಜನೆಯಡಿ ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT