ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಎರಡನೇ ಡೋಸ್: ಅರಿವು ಮೂಡಿಸಲು ಜಿಲ್ಲಾಧಿಕಾರಿ ಕರೆ

Last Updated 4 ಸೆಪ್ಟೆಂಬರ್ 2021, 15:42 IST
ಅಕ್ಷರ ಗಾತ್ರ

ವಿಜಯಪುರ: ಮೊದಲನೇ ಲಸಿಕೆ ಪಡೆಯದ ಅರ್ಹ ಫಲಾನುಭವಿಗಳಿಗೆ ಹಾಗೂ ಎರಡನೇ ಡೋಸ್ ಪಡೆಯಬೇಕಾದವರಿಗೆ ಆದಷ್ಟು ಶೀಘ್ರ ಲಸಿಕೆ ಹಾಕಿಸಿಕೊಳ್ಳುವಂತೆ ಮನೆಮನೆಗೆ ತೆರಳಿ ತಿಳಿಹೇಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ ಅವರು ಅಧಿಕಾರಿಗಳು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕೋವಿಡ್‌ ಎರಡನೇ ಲಸಿಕೆ ಕುರಿತು ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ನೋಡಲ್ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರ ಮಾತನಾಡಿದರು.

ಹೆಚ್ಚಿನ ಸಿಬ್ಬಂದಿ ಬಳಸಿಕೊಂಡು ಲಸಿಕಾಕರಣದಲ್ಲಿ ಪ್ರಗತಿ ಸಾಧಿಸಿ ಮತ್ತು ಸಂಬಂಧಪಟ್ಟ ಇಲಾಖೆಗಳ ಸಹಕಾರವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.

ಎರಡನೇ ಲಸಿಕೆ ಪಡೆಯುವಂತೆ ದೂರವಾಣಿ ಮುಖಾಂತರವೂ ಕರೆ ಮಾಡಿ ತಿಳಿಸಬೇಕು ಎಂದು ಸೂಚಿಸಿದರು.

ಮೂರನೇ ಅಲೆ ಬರುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ಗಡಿ ಭಾಗದ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿಹೇಳಬೇಕು ಹಾಗೂ ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಪೋಸ್ಟರ್‌ ಹಾಗೂ ದಿನ ಪತ್ರಿಕೆಗಳ ಮೂಲಕಲಸಿಕೆ ಪಡೆಯುವಂತೆ ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ನಗರದಲ್ಲಿ ಒಟ್ಟು ಗುರಿ 2,18,413 ಅರ್ಹ ಫಲಾನುಭವಿಗಳಿಗೆ ಲಸಿಕಾರಣ ನೀಡುವ ಗುರಿ ಹೊಂದಿದ್ದು, ಮೊದಲನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ 1,84,095(ಶೇ 84.29) ಹಾಗೂ ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ 61,179(ಶೇ 33.23) ಆಗಿದೆ ಎಂದರು.

ಸಭೆಯಲ್ಲಿ ವಿಜಯಪುರ ತಾಲ್ಲೂಕು ವೈದ್ಯಾಧಿಕಾರಿ ಡಾ.ಕವಿತಾ, ಆರ್.ಸಿ.ಎಚ್ ಅಧಿಕಾರಿ ಡಾ.ಮಹೇಶ್ ನಾಗರಬೆಟ್ಟ, ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT