ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‍ ಎರಡನೇ ಡೋಸ್: ವಿಜಯಪುರ ಜಿಲ್ಲೆಗೆ ಅಗ್ರಸ್ಥಾನ

Last Updated 6 ಡಿಸೆಂಬರ್ 2021, 15:29 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಅರ್ಹ ವಯಸ್ಕರಿಗೆ ಕೋವಿಡ್‍ನ ಎರಡನೇಡೋಸ್ ಲಸಿಕೆ ನೀಡಿರುವುದರಲ್ಲಿ ವಿಜಯಪುರ ತನ್ನ ನೆರೆಯ ಜಿಲ್ಲೆಗಳಿಗಿಂತ ಮುಂಚೂಣಿಯಲ್ಲಿದೆ.

ಈಗಾಗಲೇ 16,25,924 ವಯಸ್ಕರಿಗೆ ಮೊದಲನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ತಿಳಿಸಿದ್ದಾರೆ.

10,16,225 ರಷ್ಟು ವಯಸ್ಕರಿಗೆ (ಶೇ 62) ಎರಡನೇ ಡೋಸ್ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇಲ್ಲಿವರೆಗೆ ಒಂದನೇ ಡೋಸ್ ಪಡೆಯದೇ ಇರುವ ಅರ್ಹ ಫಲಾನುಭವಿಗಳು ಕೂಡಾ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು. ಹಾಗೆಯೇ ಉಳಿದ ಎರಡನೇ ಡೋಸ್ ಪಡೆಯದೇ ಇರುವ ಅರ್ಹ ಫಲಾನುಭವಿಗಳು ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಕೋವಿಡ್‌ ಎರಡನೇ ಅಲೆ ಜಿಲ್ಲೆಯಲ್ಲಿ ಬರದ ಹಾಗೇ ಜಾಗೃತಿ ವಹಿಸಬೇಕಾಗಿದೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿದೆ.ಶಾಲಾ ಕಾಲೇಜುಗಳ ಪೋಷಕರಿಗೆ ಎರಡನೇ ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.

ಕೋವಿಡ್ ಲಸಿಕೆಯ ಸೋಂಕಿನ ಹರಡುವಿಕೆ ಹಾಗೂ ಕಾಯಿಲೆಯ ತೀವ್ರತೆ ತಡೆಯಲು ಸಹಕಾರಿಯಾಗಿದೆ. ಆದ್ದರಿಂದ ಎಲ್ಲರೂ ಆದಷ್ಟು ಬೇಗ ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT