ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಹಿನ್ ಶಿಕ್ಷಣ ಸಂಸ್ಥೆ: ₹5 ಕೋಟಿ ವಿದ್ಯಾರ್ಥಿವೇತನ

Last Updated 9 ನವೆಂಬರ್ 2020, 13:16 IST
ಅಕ್ಷರ ಗಾತ್ರ

ವಿಜಯಪುರ: ಬೀದರ್‌ನ ಶಾಹಿನ್ ಸಮೂಹ‌ ಶಿಕ್ಷಣ ಸಂಸ್ಥೆಯಿಂದ ಪ್ರಸಕ್ತ ವರ್ಷ ದೇಶದ 42 ಶಾಖೆಗಳಲ್ಲಿರುವ ಮೂರು ಸಾವಿರ ವಿದ್ಯಾರ್ಥಿಗಳಿಗೆ ₹ 5 ಕೋಟಿ ವಿದ್ಯಾರ್ಥಿವೇತನ ನೀಡಲು ಉದ್ದೇಶಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್‌ ಖದೀರ್‌ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಮಾತನಾಡಿದ ಅವರು,ಶಾಹಿನ್‌ ಶಿಕ್ಷಣ ಸಂಸ್ಥೆಯು ಪ್ರಸಕ್ತ ನೀಟ್ ದೀರ್ಘ ಕಾಲದ ರಿಪಿಟರ್ಸ್‌ಗಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ನಿರ್ಧರಿಸಿದೆ ಎಂದರು.

ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಅದ್ಯತೆ ಕೊಡಲಾಗುವುದು. ಕೋವಿಡ್‌ನಿಂದ ಪಾಲಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ನೀಟ್ ತರಬೇತಿ ನೀಡಲಾಗುವುದು ಎಂದು ಹೇಳಿದರು.

ವಿದ್ಯಾರ್ಥಿಗಳು ವೆಬ್‍ಸೈಟ್‍ನಲ್ಲಿ ಉಚಿತವಾಗಿ ಹೆಸರು ನೋಂದಾಯಿಸಿ ವಿದ್ಯಾರ್ಥಿವೇತನದ ಲಾಭ ಪಡೆದುಕೊಳ್ಳಬಹುದು. ನೀಟ್ ದೀರ್ಘ ಕಾಲದ ರಿಪಿಟರ್ ಪ್ರವೇಶಕ್ಕೆ ನ.15 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಟೋಲ್‍ಫ್ರೀ ಸಂಖ್ಯೆ 18001216235ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

ನೀಟ್‌ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ರ‍್ಯಾಂಕ್‌ ಹಾಗೂ ರಾಷ್ಟ್ರಮಟ್ಟದಲ್ಲಿ 85ನೇ ರ‍್ಯಾಂಕ್‌ ಪಡೆದ ಬೀದರ್‌ನ ಶಾಹೀನ್‌ ಕಾಲೇಜಿನ ವಿದ್ಯಾರ್ಥಿ ಅರ್ಬಾಜ್‌ ಅಹ್ಮದ್‌, ಆರ್ಥಿಕವಾಗಿ ಮತ್ತು ಕೌಟುಂಬಿಕವಾಗಿ ಸಂಕಷ್ಟದಲ್ಲಿದ್ದ ನನಗೆ ಶಾಹಿನ್‌ ಶಿಕ್ಷಣ ಸಂಸ್ಥೆಯಿಂದ ನೆರವು ದೊರೆತ ಕಾರಣ ನೀಟ್‌ನಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕ ಎಸ್. ಶರೀಫ್‌, ಎಂ. ಇಮ್ತಿಯಾಜ್‌ ಅಹಮದ್‌, ಎಸ್. ಶಾಹನೂರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT