ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜೀವನದಲ್ಲಿ ಶರಣರ ತತ್ವಾದರ್ಶ ಅಳವಡಿಸಿಕೊಳ್ಳಿ: ಸುನೀಲಗೌಡ ಪಾಟೀಲ

Published 10 ಆಗಸ್ಟ್ 2024, 15:27 IST
Last Updated 10 ಆಗಸ್ಟ್ 2024, 15:27 IST
ಅಕ್ಷರ ಗಾತ್ರ

ವಿಜಯಪುರ: ‘ಶರಣರ ತತ್ವಾದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಬೇಕು’ ಎಂದು ವಿಧಾನಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.

ಬಬಲೇಶ್ವರ ತಾಲ್ಲೂಕಿನ ಕೊಡಬಾಗಿಯಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾಗಿರುವ ಅಕ್ಕಮಹಾದೇವಿ ಗುಡಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಅಕ್ಕಮಹಾದೇವಿ ನಮಗೆಲ್ಲರಿಗೂ ತಮ್ಮ ಆಚಾರ, ವಿಚಾರ, ವಚನಗಳಿಂದ ಮಾದರಿಯಾಗಿದ್ದಾರೆ. ಶರಣ, ಶರಣೆಯರ ದೇವಸ್ಥಾನ ನಿರ್ಮಿಸುವುದರ ಜೊತೆಗೆ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬಾಳು ಹಸನಾಗುತ್ತದೆ’ ಎಂದರು.

‘ಶ್ರಾವಣ ಮಾಸ ಪ್ರಾರಂಭವಾದಾಗ ಕೆಲವರು ತಮ್ಮ ಆಚಾರ, ವಿಚಾರಗಳನ್ನು ಬದಲಾಯಿಸಿಕೊಳ್ಳುತ್ತಾರೆ. ಈ ನಡವಳಿಕೆ ಕೇವಲ ಶ್ರಾವಣ ಮಾಸಕ್ಕೆ ಸೀಮಿತವಾಗದೇ, ಜೀವನದುದ್ದಕ್ಕೂ ಪಾಲಿಸುವ ಮೂಲಕ ಶರಣರ ಆಶಯದಂತೆ ಜೀವನ ಸಾಗಿಸಬೇಕು’ ಎಂದು ಹೇಳಿದರು.

ಇದಕ್ಕೂ ಮುನ್ನ ಮದಗುಣಕಿಯಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಳ್ಳಲಾಗಿರುವ ₹25 ಲಕ್ಷ ವೆಚ್ಚದ ಸಿ.ಸಿ ರಸ್ತೆಗೆ ಭೂಮಿಪೂಜೆ, ಪಿ.ಆರ್.ಇ.ಡಿ ವತಿಯಿಂದ ₹20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡ ಉದ್ಘಾಟಿಸಿದರು.

ಹಿರೇಮಠದ ಮಹಾದೇವ ಸ್ವಾಮೀಜಿ, ಮಮದಾಪುರ ವಿರಕ್ತಮಠದ ಅಭಿನವ ಮುರಗೇಂದ್ರ ಸ್ವಾಮೀಜಿ, ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ, ಮುಖಂಡರಾದ ಈರಗೊಂಡ ಬಿರಾದಾರ, ಬಸವರಾಜ ದೇಸಾಯಿ, ಮುತ್ತಪ್ಪ ಶಿವಣ್ಣವರ, ಅಪ್ಪುಗೌಡ ಪಾಟೀಲ ಶೇಗುಣಸಿ, ಕಿಟ್ಟು ಕುಲಕರ್ಣಿ, ಕವಿತಾ ಮಲ್ಲಯ್ಯ ಮಠಪತಿ, ಮಲ್ಲಿಕಾರ್ಜುನ ಗಂಗೂರ, ಶಿವನಗೌಡ ಬಿರಾದಾರ, ಬಸಪ್ಪ ಭಾವಿಕಟ್ಟಿ, ಸಂಗಮೇಶ ಬಿರಾದಾರ, ಬಿ.ಬಿ. ಪಾಟೀಲ ಶೆಗುಣಿಸಿ, ಕೌಸರ್ ಅತ್ತಾರ, ಶಂಕ್ರೆಪ್ಪ ಬಿರಾದಾರ, ಎಚ್.ಬಿ. ಹರನಟ್ಟಿ, ಜಿ.ಬಿ. ಹರನಟ್ಟಿ, ಅಧಿಕಾರಿ ಕೆ.ಕೆ. ಚವ್ಹಾಣ, ಅನೀಲ ಹಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT