ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ಅಮೃತ ಮಹೋತ್ಸವ ಜನೋತ್ಸವವಾಗಲಿ: ಸಚಿವೆ ಜೊಲ್ಲೆ

Last Updated 15 ಆಗಸ್ಟ್ 2021, 7:35 IST
ಅಕ್ಷರ ಗಾತ್ರ

ವಿಜಯಪುರ: ನಗರದ ಹೊರ ವಲಯದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ನೆರವೇರಿಸಿದರು.

ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಪಥ ಸಂಚಲನ ವೀಕ್ಷಿಸಿದರು.

ಸ್ವಾತಂತ್ರೋತ್ಸವ ಸಂದೇಶ ನೀಡಿದ ಸಚಿವೆ, ಸ್ವಾತಂತ್ರ್ಯದ ಅಮೃತ ಮಹೋತ್ಸವವು ಕೇವಲ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗದೇ, ಅದರಲ್ಲಿ ಪ್ರತಿಯೊಬ್ಬ ಭಾರತೀಯರೂ ದೇಶಪ್ರೇಮದೊಂದಿಗೆ ಭಾಗವಹಿಸುವ ಮೂಲಕ ಜನೋತ್ಸವವಾಗಬೇಕು ಎಂದರು.

ಕೋವಿಡ್ ಸಂದರ್ಭದಲ್ಲಿ ಅನುಪಮ ಸೇವೆಗೈದ ವಿವಿಧ ಕ್ಷೇತ್ರಗಳ ಪ್ರಮುಖರನ್ನು ಸಚಿವರು ಸನ್ಮಾನಿಸಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಜಿಲ್ಲೆಗೆ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT