ಸೋಮವಾರ, ಜನವರಿ 25, 2021
27 °C

ವಿಜಯಪುರ| ಶೂಟ್‌ಔಟ್‌ ಪ್ರಕರಣ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಸಾಹುಕಾರ ಬೈರಗೊಂಡ ಅವರು ನಗರದ ಹೊರವಲಯದ ಕನ್ನಾಳ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನ.2ರಂದು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್‌ನಿಂದ ಡಿಕ್ಕಿ ಹೊಡೆಸಿ, ಬಳಿಕ ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ.

ಜಾಲಗೇರಿ ತಾಂಡಾದ ಸಚಿನ್‌ ಚವ್ಹಾಣ(26) ಮತ್ತು ಚಡಚಣದ ಮಲ್ಲಿಕಾರ್ಜುನ ಪಾಟೀಲ(26) ಅವರನ್ನು ಬಂಧಿಸಿ, ಒಂದು ಕಂಟ್ರಿ ಪಿಸ್ತೂಲ್‌, ಒಂದು ಜೀವಂತ ಗುಂಡು, ಒಂದು ತಲವಾರ್‌ ಹಾಗೂ ಒಂದು ಮೊಬೈಲ್‌ ಫೊನ್‌ ವಶಪಡಿಸಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು