ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದ್ದೇಬಿಹಾಳ | ಶಾರ್ಟ್‌ ಸರ್ಕ್ಯೂಟ್‌: ಮೂವರು ವಿದ್ಯಾರ್ಥಿಗಳಿಗೆ ಗಾಯ

Published 27 ಫೆಬ್ರುವರಿ 2024, 16:22 IST
Last Updated 27 ಫೆಬ್ರುವರಿ 2024, 16:22 IST
ಅಕ್ಷರ ಗಾತ್ರ

ಮುದ್ದೇಬಿಹಾಳ (ವಿಜಯಪುರ ಜಿಲ್ಲೆ): ತಾಲ್ಲೂಕಿನ ಘಾಳಪೂಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿಶ್ರಾಂತಿ ಕೊಠಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಮಲ್ಲು ಭಜಂತ್ರಿ, ಸಮರ್ಥ ಭಜಂತ್ರಿ ಹಾಗೂ ಸಾಗರ ಮಾದರ ಎಂಬ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.  

‘ಮೂವರನ್ನು ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶ್ರಾಂತಿ ಕೊಠಡಿಯಲ್ಲಿ 16 ವಿದ್ಯಾರ್ಥಿಗಳಿದ್ದರು. ಬೆಂಕಿ ಕಂಡ ಕೂಡಲೇ ಉಳಿದವರು ಕೊಠಡಿಗಳಿಂದ ಹೊರ ಓಡಿ ಹೋದರು. ಘಟನೆ ಭಾನುವಾರ ನಡೆದಿದ್ದರೂ ಮಂಗಳವಾರ ನಮ್ಮ ಗಮನಕ್ಕೆ ತರಲಾಗಿದೆ. ಇದಕ್ಕೆ ಶಾಲೆಯ ಪ್ರಾಚಾರ್ಯರು ಮತ್ತು ವಾರ್ಡನ್ ನಿರ್ಲಕ್ಷ್ಯವೇ ಕಾರಣ’ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.

ತಹಶೀಲ್ದಾರ್ ಬಸವರಾಜ ನಾಗರಾಳ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮೇಶ ಲಮಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ವಸತಿ ನಿಲಯಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT