ಸಿಂದಗಿ: ಸಿಂದಗ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ.

ತಾಲ್ಲೂಕಿನ ರಾಂಪೂರ ಪಿ.ಎ ಬಳಿ ಮಂಗಳವಾರ ನಡೆದ ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತ ನಾಗರಹಳ್ಳಿ ಗ್ರಾಮದ ಪ್ರಮೋದ ಬಾಗೇವಾಡಿ ಹಲ್ಲೆಗೊಳಗಾಗಿದ್ದಾರೆ. ಗಾಯಾಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಬಲೇಶ್ವರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಕುಮಾರ ದೇಸಾಯಿ ಹಾಗೂ 15-20 ಜನ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿ ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಗಾಯಾಳು ಪ್ರಮೋದ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಪರ ಪ್ರಮೋದ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ. ಕೂಡಲೇ ಆರೋಪಿಯನ್ನು ಬಂಧಿಸಬೇಕು ಎಂದು ಬಿಜೆಪಿ ಪ್ರಮುಖ ಶಿವಾನಂದ ಆಲಮೇಲ ಒಳಗೊಂಡು ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.