ಸಿಂದಗಿ: ‘ಗ್ರಾಮಗಳ ಏಳ್ಗೆಯೇ ಮತಕ್ಷೇತ್ರದ ಸಮಗ್ರ ಅಭಿವೃದ್ಧಿ, ನನ್ನ ಮೂಲಮಂತ್ರ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ತಾಲ್ಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹25 ಲಕ್ಷ ವೆಚ್ಚದಲ್ಲಿ ಲಕ್ಷ್ಮಿ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣ, ₹65 ಲಕ್ಷ ವೆಚ್ಚದ ಆರೋಗ್ಯ ಇಲಾಖೆಯ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಆರೋಗ್ಯ ಕೇಂದ್ರದ ಕಟ್ಟಡ, ಸಮುದಾಯ ಭವನ ನಿರ್ಮಾಣ ಕುರಿತು ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಲಿದೆ. ಅಭಿವೃದ್ಧಿ ಕಾಮಗಾರಿಗಳನ್ನು ಹಂತ, ಹಂತವಾಗಿ ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.

‘ಗಾಂಧೀಜಿ ಅವರು ಕಂಡ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸುವಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮಗಳ ಸಬಲೀಕರಣದಲ್ಲಿ ರಾಜ್ಯವು ದೇಶಕ್ಕೇ ಮಾದರಿಯಾಗಿದೆ’ ಎಂದರು.

ಪ್ರಮುಖರಾದ ವಿಜುಗೌಡ ಪಾಟೀಲ, ವಿಶ್ವನಾಥ ಪಾಟೀಲ, ದೊಡ್ಡಪ್ಪ ಮಂಗೊಂಡಿ, ಕಂಠೆಪ್ಪ ಕಲ್ಲೂರ, ಶಿವಶಂಕರ ನಾಗಠಾಣ, ಯಮನಪ್ಪ ಚೌಧರಿ, ದಯಾನಂದ ಕಲ್ಲೂರ, ಶಂಕರ ಬಗಲಿ, ಭಾಗಣ್ಣ ನಾಗಠಾಣ, ಸಿದ್ದಣ್ಣ ಚೌಧರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-26-151850532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.