ಬುಧವಾರ, ಮಾರ್ಚ್ 29, 2023
32 °C

ಸಿಂದಗಿ ಉಪ ಚುನಾವಣೆ: ಮತ ಎಣಿಕೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ರಾಜ್ಯದ ಗಮನ ಸೆಳೆದಿರುವ ಸಿಂದಗಿ ಉಪ ಚುನಾವಣೆ ಮತ ಎಣಿಕೆ ಆರಂಭವಾಗಿದೆ.

ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ನಡೆಯತ್ತಿರುವ ಮತ ಎಣಿಕೆ ಕಾರ್ಯದ ಆರಂಭದಲ್ಲಿ ಅಂಚೆ ಮತಪತ್ರಗಳ ಎಣಿಕೆ ನಡೆದಿದೆ.

ಮತಎಣಿಕೆ ಎರಡು ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ ತಲಾ 7 ಟೇಬಲ್‌ನಂತೆ  ಒಟ್ಟು 14 ಟೇಬಲ್‌ ಇದೆ. ಪ್ರತಿ ಟೇಬಲ್‌ಗೆ ತಲಾ ಒಬ್ಬ ಮೈಕ್ರೋ ಅಬ್ಸರ್ವರ್ ಒಬ್ಬ ಮತಎಣಿಕೆ ಮೇಲ್ವಿಚಾರಕ, ಒಬ್ಬ ಮತಎಣಿಕೆ ಸಹಾಯಕರು ಸೇರಿದಂತೆ ಒಟ್ಟು 60 ಸಿಬ್ಬಂದಿ ಮತ ಎಣಿಕೆಯಲ್ಲಿ ತೊಡಗಿದ್ದಾರೆ. ಒಟ್ಟು 22 ಸುತ್ತು ಮತಎಣಿಕೆ ನಡೆಯಲಿದೆ.

ಕಾಂಗ್ರೆಸ್‌ನ ಅಶೋಕ ಮನಗೂಳಿ, ಬಿಜೆಪಿಯ ರಮೇಶ ಭೂಸನೂರ ಮತ್ತು ಜೆಡಿಎಸ್‌ನ ನಾಜಿಯಾ ಶಕೀಲ್‌ ನಡುವೆ ತುರುಸಿನ ಪೈಪೋಟಿ ನಡೆದಿದ್ದು, ಈ ಮೂವರಲ್ಲಿ ಯಾರು ಮುಂದಿನ ಒಂದೂವರೆ ವರ್ಷದ ಅವಧಿಗೆ ಸಿಂದಗಿ ಶಾಸಕರಾಗುತ್ತಾರೆ ಎಂಬ ಕುತೂಹಲದ ಪ್ರಶ್ನೆಗೆ ಮಧ್ಯಾಹ್ನದ ಒಳಗೆ ಉತ್ತರ ಲಭಿಸಲಿದೆ.

ಒಂದೆಡೆ ಕಾಂಗ್ರೆಸ್‌ನವರು, ಇನ್ನೊಂದೆಡೆ ಬಿಜೆಪಿಯವರು ತಮ್ಮದೇ ಗೆಲುವು ಎಂಬ ಲೆಕ್ಕೆಚಾರದಲ್ಲಿ ಬೀಗುತ್ತಿದ್ದು, ವಿಜಯೋತ್ಸವಕ್ಕೂ ಅಣಿಯಾಗಿದ್ದಾರೆ.

ಶನಿವಾರ(ಅ.30) ನಡೆದ ಮತದಾನದಲ್ಲಿ ಒಟ್ಟು 2,34,437 ಮತದಾರರ ಪೈಕಿ 1,62,852 ಮತದಾರರು ಅಂದರೇ, ಶೇ 69.47 ರಷ್ಟು ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಬಿಗಿ ಭದ್ರತೆ: ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗೆ 4 ಡಿವೈಎಸ್ಪಿ, 5 ಸಿಪಿಐ, 23 ಪಿಎಸ್‌ಪಿ, 25 ಎಎಸ್‌ಐ, 282 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸೈನಿಕ್‌ ಶಾಲೆಯ ಹೊರಭಾಗದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು