ಸಿಂದಗಿ: ‘ಬಂದಾಳ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಮದಿಂದ ಸಿಂದಗಿ ನಗರಕ್ಕೆ ಹೋಗುವ ರಸ್ತೆಗೆ ಅಡ್ಡಲಾಗಿ ಹಳ್ಳಕ್ಕೆ ಸೇತುವೆ ನಿರ್ಮಾಣಕ್ಕಾಗಿ ಸಣ್ಣ ನೀರಾವರಿ ಇಲಾಖೆ ₹1.81 ಕೋಟಿ ಅನುದಾನ ಬಿಡುಗಡೆಗೊಳಿಸಿದೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ತಾಲ್ಲೂಕಿನ ಬಂದಾಳ ಗ್ರಾಮದಲ್ಲಿ ಸೋಮವಾರ ಸಂಜೆ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಗ್ರಾಮೀಣ ಏಳ್ಗೆಯೇ ದೇಶದ ನಿಜವಾದ ಅಭಿವೃದ್ಧಿಯಾಗಿದೆ. ಗುತ್ತಿಗೆದಾರರು, ಸರ್ಕಾರದ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಗುಣಮಟ್ಟದ ಕಾಮಗಾರಿಯಾಗುವಂತೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ದಿಸೆಯಲ್ಲಿ ಸಾರ್ವಜನಿಕರು ಕಳಪೆ ಕಾಮಗಾರಿ ನಡೆಯದಂತೆ ನೋಡಿಕೊಳ್ಳಬೇಕು’ ಎಂದರು.

ಪ್ರಥಮ ದರ್ಜೆ ಗುತ್ತಿಗೆದಾರ ನಾರಾಯಣ ಕುಲಕರ್ಣಿ, ಮುತ್ತು ಮುಂಡೇವಾಡಗಿ, ಬಸಯ್ಯ ಹಿರೇಮಠ, ವಿ.ಬಿ.ಕುರಡೆ, ಕುಮಾರ ದೇಸಾಯಿ, ಷಣ್ಮುಖಯ್ಯ ಹಿರೇಮಠ, ದುಂಡಪ್ಪ ಬಿರಾದಾರ, ದಯಾನಂದ ಹಿರೇಮಠ, ಧರ್ಮರಾಜ ಬಡಾನೂರ, ಗೊಲ್ಲಾಳಪ್ಪ ನಾಯ್ಕೋಡಿ, ಶರಣಪ್ಪ ಜಮಾದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-26-896968988

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.