ಶನಿವಾರ, ಅಕ್ಟೋಬರ್ 16, 2021
22 °C

ಸಿಂದಗಿ ಉಪ ಚುನಾವಣೆ: ಅಂತಿಮ ಕಣದಲ್ಲಿ ಆರು ಅಭ್ಯರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಸಿಂದಗಿ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದಿದ್ದು, ಅಂತಿಮವಾಗಿ ಆರು ಜನ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿ ರಾಹುಲ್ ಸಿಂಧೆ ತಿಳಿಸಿದ್ದಾರೆ.

ಕಾಂಗ್ರೆಸ್‌ನಿಂದ ಅಶೋಕ ಮನಗೂಳಿ, ಜೆಡಿಎಸ್‌ನಿಂದ ನಾಜಿಯಾ ಅಂಗಡಿ, ಬಿಜೆಪಿ ರಮೇಶ ಭೂಸನೂರ, ಕರ್ನಾಟಕ ರಾಷ್ಟ್ರ ಸಮಿತಿಯ ಡಾ.ಸುನೀಲ್‌ಕುಮಾರ್ ಹೆಬ್ಬಿ ಹಾಗೂ ಪಕ್ಷೇತರ ಅಭ್ಯರ್ಥಿಗಳಾದ ಜಿಲಾನಿ ಗುಡುಸಾಬ್ ಮುಲ್ಲಾ ಹಾಗೂ ದೀಪಿಕಾ ಎಸ್. ಪಡಸಲಗಿ ಅವರು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದ್ದ ಬುಧವಾರ ರಾಷ್ಟ್ರೀಯ ಸಮಾಜ ಪಕ್ಷದ ವಿಕ್ರಮ ಪಂಡಿತ ಹಾಗೂ ಪಕ್ಷೇತರ ಅಭ್ಯರ್ಥಿಯಾದ ಅಬ್ದುಲ್ ರಹಿಮಾನ್‌ ದುಂಡಸಿ ಅವರು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದುಕೊಂಡರು. 

ಮತದಾನ ಅ.30ರಂದು ನಡೆಯಲಿದ್ದು, ಮತ ಎಣಿಕೆಯು ನ.2 ರಂದು ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು