ವಿಜಯಪುರ: ಸಿಂದಗಿ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಮಾಡಬಹುದಾದ ವಿವಿಧ ವೆಚ್ಚಗಳ ಕರಡು ದರಪಟ್ಟಿ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಮನವರಿಕೆ ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಈ ಚುನಾವಣೆ ಅಂಗವಾಗಿ ಅಭ್ಯರ್ಥಿಗಳು ಬಳಸುವ ವಿವಿಧ ವಾಹನಗಳು, ಪ್ರಚಾರ ಸಾಮಗ್ರಿ ಹಾಗೂ ವಿವಿಧ ವೆಚ್ಚಗಳಿಗೆ ಸಂಬಂಧಿಸಿದಂತೆ ಕರಡು ದರಪಟ್ಟಿ ಪ್ರಕಟಿಸಿದರು.

ಯಾವುದೇ ಆಕ್ಷೇಪಣೆಗಳಿದ್ದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಅ.5ರ ಸಂಜೆಯೊಳಗಾಗಿ ಸಲ್ಲಿಸಬಹುದಾಗಿದ್ದು, ನಂತರ ಪುನರ್ ಪರಿಶೀಲಿಸಿ ಅಂತಿಮ ದರ ಪಟ್ಟಿ ಹೊರಡಿಸಲಾಗುವುದು ಎಂದು ತಿಳಿಸಿದರು.

ಚುನಾವಣೆಗೆ ಸ್ಫರ್ಧಿಸಿದ ಅಭ್ಯರ್ಥಿಗಳು ಪ್ರಚಾರಕ್ಕೆ ಸಂಬಂಧಪಟ್ಟಂತೆ ಕರಪತ್ರ ಮುದ್ರಿಸಬೇಕಾದಲ್ಲಿ ಕಡ್ಡಾಯವಾಗಿ ಡಿಕ್ಲೇರೇಶನ್ ಸಲ್ಲಿಸಬೇಕು. ಕರಪತ್ರದ ಕೆಳಭಾಗದಲ್ಲಿ ಮುದ್ರಕರ ಹೆಸರು, ಪ್ರತಿಗಳ ಸಂಖ್ಯೆ ಸೇರಿದಂತೆ ನಿಗದಿತ ಮಾಹಿತಿಯನ್ನು ಮುದ್ರಿಸಿರಬೇಕು. ಮುದ್ರಕರು ಕಡ್ಡಾಯವಾಗಿ ಡಿಕ್ಲೇರೇಶನ್ ಸಲ್ಲಿಸಬೇಕು. ಸ್ಟಾರ್ ಪ್ರಚಾರಕರು, ಅಭ್ಯರ್ಥಿಗಳು ಅಂತಿಮಗೊಳ್ಳುವ ಮುಂಚೆ ಈ ಕ್ಷೇತ್ರಕ್ಕೆ ಆಗಮಿಸಿದ್ದಲ್ಲಿ ಈ ಸ್ಟಾರ್ ಪ್ರಚಾರಕರ ಉದ್ದೇಶ, ಪ್ರಯಾಣದ ವಿವರ ಸೇರಿದಂತೆ ಅವಶ್ಯಕ ಮಾಹಿತಿಯನ್ನು ಅಥವಾ ಅರ್ಜಿಯನ್ನು ಲಿಖಿತ ರೂಪದಲ್ಲಿ ನೀಡಬೇಕು ಎಂದು ತಿಳಿಸಿದರು.

ಸಿಂದಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು. 18 ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ನೇಮಿಸಲಾಗಿದ್ದು, ಅವರ ವಾಹನ ಹಾಗೂ ಸೆಕ್ಟರ್ ಅಧಿಕಾರಿಗಳ ವಾಹನಗಳಿಗೆ ಜಿಪಿಎಸ್ ಸಹ ಅಳವಡಿಸಲಾಗಿದೆ. ಅದೇ ರೀತಿ ಎಸ್‍ಎಸ್‍ಟಿ ತಂಡಗಳು ಮತ್ತು ವಿಎಸ್‍ಟಿ ತಂಡಗಳು ಸಹ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ರ‍್ಯಾಂಡಮೈಜೇಶನ್:

ಸಿಂದಗಿ ವಿಧಾನಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಬ್ಯಾಲೆಟ್ ಯೂನಿಟ್, ಕಂಟ್ರೋಲ್ ಯೂನಿಟ್ ಹಾಗೂ ವಿವಿಪ್ಯಾಟ್‍ಗಳ ಪ್ರಥಮ ರ‍್ಯಾಂಡಮೈಜೇಶನ್ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ರಾಜಕೀಯ ಪ್ರತಿನಿಧಿಗಳ ಸಮಕ್ಷಮ ನಡೆಯಿತು.

ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 297 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. 665 ಬ್ಯಾಲೆಟ್ ಯೂನಿಟ್ ಮತ್ತು 657 ಕಂಟ್ರೋಲ್ ಯೂನಿಟ್ ಹಾಗೂ 656 ವಿವಿಪ್ಯಾಟ್‍ಗಳನ್ನು ಬಳಸಲು ನಿರ್ಧರಿಸಲಾಗಿದೆ. ಈ ಕುರಿತು ಚುನಾವಣಾ ಆಯೋಗದಿಂದ ಅನುಮೋದನೆ ಪಡೆಯಲು ನಿರ್ಧರಿಸಲಾಗಿದೆ. ಚುನಾವಣೆ ಯಶಸ್ವಿಯಾಗಿ ನಡೆಯಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಶೇ 40 ರಷ್ಟು ಬ್ಯಾಲೆಟ್ ಯೂನಿಟ್ ಹಾಗೂ ಶೇ 40 ರಷ್ಟು ಕಂಟ್ರೋಲ್ ಯೂನಿಟ್ ಸೇರಿಸಲಾಗುತ್ತಿದ್ದು, ಹೆಚ್ಚುವರಿಯಾಗಿ ತರಬೇತಿ ಉದ್ದೇಶದಿಂದ ಶೇ 50 ರಷ್ಟು ವಿವಿ ಪ್ಯಾಟ್ ಸಹ ಮೀಸಲಿಡಲಾಗಿದೆ.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಚುನಾವಣೆ ಶಾಖೆಯ ತಹಶೀಲ್ದಾರ ಶಾಂತಲಾ, ಹಾದಿಮನಿ ಹಾಗೂ ಸಂಜಯ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.