ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂದಗಿ ಉಪಚುನಾವಣೆ: ಬಹಿರಂಗ ಪ್ರಚಾರ ಅಂತ್ಯ ನಾಳೆ

Last Updated 25 ಅಕ್ಟೋಬರ್ 2021, 19:30 IST
ಅಕ್ಷರ ಗಾತ್ರ

ವಿಜಯಪುರ: ಸಿಂದಗಿ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಬಹಿರಂಗ ಪ್ರಚಾರ ಅ.27ರ ಸಂಜೆ 7ಕ್ಕೆ ಕೊನೆಗೊಳ್ಳುತ್ತಿದ್ದು ಈ ಅವಧಿಯ ನಂತರ ಮತಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಸೂಚಿಸಿದ್ದಾರೆ.

ಕಲ್ಯಾಣ ಮಂಟಪ, ಸಮುದಾಯ ಭವನ,ಹೋಟೆಲ್‍ ಮತ್ತು ಅತಿಥಿಗೃಹಗಳಲ್ಲಿ ವಾಸ್ತವ್ಯ ಹೂಡಿದ ಸಿಂದಗಿ ಮತಕ್ಷೇತ್ರದ ಮತದಾರರಲ್ಲದವರು ಅ 27ರಸಂಜೆ 7 ನಂತರ ಕ್ಷೇತ್ರದಿಂದ ಹೊರ ಹೋಗಬೇಕು ಎಂದು ಅವರು ಹೇಳಿದ್ದಾರೆ.

ನಿಷೇಧಾಜ್ಞೆ:ಸಿಂದಗಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಅ.27ರ ಸಂಜೆ 7ರಿಂದ ಅ.30 ರವರೆಗೆ ನಿಷೇಧಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸಿಂದಗಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಮಾಡುವುದನ್ನು ನಿಷೇಧಿಸಲಾಗಿದೆ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ ಐದು ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ ಎಂದು ತಿಳಿಸಿದ್ದಾರೆ.

ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ. ಝರಾಕ್ಸ್ ಅಂಗಡಿ, ಬುಕ್‍ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಲಾಗಿದೆ.

ಮತದಾನ ದಿನದಂದು ಮತಗಟ್ಟೆಗಳ 100 ಮೀಟರ್ ವ್ಯಾಪ್ತಿಯಲ್ಲಿ ಚುನಾವಣೆ ಪ್ರಚಾರ ನಿಷೇಧಿಸಿದೆ. ಕಲ್ಲುಗಳನ್ನು, ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.

ಮತಗಟ್ಟೆಗಳ ಸಮೀಪ ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಮತದಾನ ದಿನದಂದು ಮತಗಟ್ಟೆಗಳ ಸುತ್ತಾ 100 ಮೀಟರ್ ವ್ಯಾಪ್ತಿಯಲ್ಲಿ (ಚುನಾವಣಾ ಕಾರ್ಯದಲ್ಲಿ ಚುನಾವಣಾಧಿಕಾರಿ,ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು, ಸಿಬ್ಬಂದಿ ಹೊರುಪಡಿಸಿ) ಮೊಬೈಲ್ ಫೋನ್, ಕಾರ್ಡ್‌ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಮತದಾನ ದಿನದಂದು ಮತಗಟ್ಟೆಗಳ ಸುತ್ತಾ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್,ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT