ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂದಗಿ ಉಪಚುನಾವಣೆ: ಮತದಾನ ಆರಂಭ, ಶೇ 8.08ರಷ್ಟು ಮತ ಚಲಾವಣೆ

Last Updated 30 ಅಕ್ಟೋಬರ್ 2021, 4:07 IST
ಅಕ್ಷರ ಗಾತ್ರ

ವಿಜಯಪುರ: ಸಿಂದಗಿ ವಿಧಾನಸಭಾ ಉಪಚುನಾವಣೆ ಮತದಾನ ಪ್ರಕ್ರಿಯೆ ಬೆಳಿಗ್ಗೆ 7 ರಿಂದ ಆರಂಭವಾಗಿದೆ.

ಮತಗಟ್ಟೆ ಎದುರು ಜನರು ಸಾಲುಗಟ್ಟಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿರುವ ದೃಶ್ಯ ಕಂಡುಬಂದಿತು. ಸಂಜೆ 7ರ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,20,844 ಪುರುಷ ಮತದಾರರು, 1,13,561 ಮಹಿಳಾ ಮತದಾರರು, 32 ಇತರೆ, 147 ಸೇವಾ ಮತದಾರರು ಸೇರಿದಂತೆ ಒಟ್ಟು 2,34,584 ಮತದಾರರು ಇದ್ದು, ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಒಟ್ಟು 271 ಮತದಾನ ಕೇಂದ್ರ ಹಾಗೂ 26 ಹೆಚ್ಚುವರಿ ಮತದಾನ ಕೇಂದ್ರಗಳು ಸೇರಿದಂತೆ ಒಟ್ಟು 297 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಮತದಾನ ಶಾಂತಿಯುತವಾಗಿ ನಡೆಸುವ ಸಂಬಂಧ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಡಿವೈಎಸ್ಪಿ 2, ಸಿಪಿಐ 4, ಪಿಎಸ್ಐ 22, ಎಎಸ್ಐ 70, ಹೆಡ್ ಕಾನ್‌ಸ್ಟೆಬಲ್ ಮತ್ತು ಪೊಲೀಸ್ ಕಾನ್‌ ಸ್ಟೆಬಲ್ 477, ಡಿಎಆರ್ 40, ಐಆರ್‌ಬಿ 180, ಸಿಐಎಸ್ಎಫ್ 185 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ವೃದ್ಧರು, ಅಂಗವಿಕಲರು ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಲು ಚುನಾವಣಾ ಆಯೋಗದಿಂದ ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ.

ಎರಡು ‘ಸಖಿ’ ಮತದಾನ ಕೇಂದ್ರ, ಒಂದು ಅಂಗವಿಕಲರಿಗಾಗಿ ವಿಶೇಷ ಮತದಾನ ಕೇಂದ್ರ ತೆರೆಯಲಾಗಿದೆ. 180 ವೆಬ್ ಕಾಸ್ಟಿಂಗ್ ಮತದಾನ ಕೇಂದ್ರಗಳನ್ನೂ ಸ್ಥಾಪಿಸಲಾಗಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ತಾಂಬಾ ಮತಗಟ್ಟೆಯಲ್ಲಿ ಜನರು ಸರದಿಯಲ್ಲಿ ನಿಂತು ಮತ ಚಲಾಯಿಸಿದರು.
ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ತಾಂಬಾ ಮತಗಟ್ಟೆಯಲ್ಲಿ ಜನರು ಸರದಿಯಲ್ಲಿ ನಿಂತು ಮತ ಚಲಾಯಿಸಿದರು.

ಮತಯಂತ್ರದಲ್ಲಿ ತಾಂತ್ರಿಕ ದೋಷ: ಒಂದೂವರೆ ತಾಸು ವಿಳಂಬ
ವಿಜಯಪುರ:
ಸಿಂದಗಿ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಆಲಮೇಲ ತಾಲ್ಲೂಕಿನ ದೇವಣಗಾಂವ ಮತಗಟ್ಟೆ ಸಂಖ್ಯೆ 12ರಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಒಂದೂವರೆ ಗಂಟೆ ವಿಳಂಬವಾಗಿ ಮತದಾನ ಆರಂಭವಾಯಿತು.

ಬೆಳಿಗ್ಗೆಯೇ ಮತ ಚಲಾಯಿಸಲು ಬಂದ ನೂರಾರು ಮತದಾರರು ಕಾದು, ಕಾದು ಸುಸ್ತಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT