ಸಿಂದಗಿ: ‘ನಗರ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹಿನ್ನೆಲೆಯಲ್ಲಿ ಸೌಂದರ್ಯೀಕರಣ ಹೆಚ್ಚಿಸಲು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ನಗರದ ಕಿತ್ತೂರ ರಾಣಿ ಚನ್ನಮ್ಮ ವೃತ್ತದಲ್ಲಿ ಶನಿವಾರ ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಚಿಕ್ಕಸಿಂದಗಿ ಬೈಪಾಸ್ವರೆಗೆ ₹ 62 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಡಿವೈಡರ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಇಲ್ಲಿನ ಮಹಾತ್ಮಗಾಂಧಿ ವೃತ್ತದಿಂದ ಡಾಲ್ಫಿನ್ ಹೋಟೆಲ್ವರೆಗೆ ರಸ್ತೆ, ಡಿವೈಡರ್ ಮತ್ತು ಬೀದಿದೀಪ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. ನನ್ನ ಶಾಸಕ ಅವಧಿಯಲ್ಲಿ ಮತಕ್ಷೇತ್ರದಲ್ಲಿ ಶಾಶ್ವತ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಅದರಲ್ಲಿ ಕೆಲವು ಪೂರ್ಣಗೊಂಡಿವೆ. ಇನ್ನೂ ಹಲವು ಉಳಿದುಕೊಂಡಿವೆ. ಅವುಗಳನ್ನು ಮುಂಬರುವ ದಿನಗಳಲ್ಲಿ ಪೂರ್ಣಗೊಳಿಸುವುದಾಗಿ’ ಭರವಸೆ ನೀಡಿದರು.

‘ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಹಳ್ಳಿಗೂ ಸಮುದಾಯ ಭವನ, ರಸ್ತೆ, ಕುಡಿಯುವ ನೀರು ಕಾಮಗಾರಿಗಳು ಒಳಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸುವ ಅಭಿವೃದ್ದಿ ಕಾರ್ಯಗಳಿಗಾಗಿ ಮಂಜೂರಾತಿ ದೊರಕಿದ್ದು ಹಂತ, ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ತಾಲ್ಲೂಕು ಕೆಡಿಪಿ ಸದಸ್ಯ ಖಾದಿರ ಬಂಕಲಗಿ, ಆಲಮೇಲ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಕೊಳಾರಿ, ಪುರಸಭೆ ಮಾಜಿ ಸದಸ್ಯ ಸಾಯಬಣ್ಣ ಪುರದಾಳ, ಪರುಶರಾಮ ಕಾಂಬಳೆ, ವೈ.ಸಿ.ಮಯೂರ, ಪ್ರಭು ವಾಲಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಸೆಕ್ಶನ್ ಆಫೀಸರ್ ಸುನೀಲ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-26-945490263

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.