ಸಿಂದಗಿ: ‘ಶಾಲೆ– ಕಾಲೇಜುಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಎಂ.ಸಿ.ಮನಗೂಳಿ ಪ್ರತಿಷ್ಠಾನದಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡುತ್ತಿರುವುದು ಸ್ತುತ್ಯರ್ಹ’ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಪ್ರಶಂಸಿದರು.

ನಗರದ ಚೆನ್ನವೀರ ಸ್ವಾಮೀಜಿ ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮನಗೂಳಿ ಕುಟುಂಬದ ಸದಸ್ಯರು ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಿ ಆರೋಗ್ಯ, ಶಿಕ್ಷಣ ಸೇರಿ ಅನೇಕ ಜನಪರ ಸೇವಾ ಕಾರ್ಯ ಮಾಡುತ್ತಿದೆ’ ಎಂದರು.

ಶಾಸಕ ಅಶೋಕ ಮನಗೂಳಿ ಮಾತನಾಡಿ, ‘ನಮ್ಮ ತಂದೆ, ದಿವಂಗತ ಎಂ.ಸಿ. ಮನಗೂಳಿ ಅವರ ಕನಸು ನನಸು ಮಾಡಲು ಪ್ರತಿಷ್ಠಾನದಿಂದ ಸೇವಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಲಾಗಿದೆ. ಮುಂಬರುವ ದಿನಗಳಲ್ಲಿ ಉಳಿದೆಲ್ಲ ಶಾಲೆಗಳಿಗೂ ವಿಸ್ತರಿಸಲಾಗುವುದು’ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸಾರಿಗೆ ಅಧಿಕಾರಿ ಎಂ.ಎಸ್. ಹಿರೇಮಠ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಶಾಖೆ ಅಧ್ಯಕ್ಷ ಅಶೋಕ ವಾರದ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ, ಆಲಮೇಲ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಕೊಳಾರಿ, ಪುರಸಭೆ ಮಾಜಿ ಸದಸ್ಯ ಸಾಯಬಣ್ಣ ಪುರದಾಳ, ಪರಶುರಾಮ ಕಾಂಬಳೆ, ಎಂ.ಎ. ಖತೀಬ, ಶಿವಾನಂದ ಹಡಪದ, ಪರಮಾನಂದ ಬಗಲಿ, ಜಯಶ್ರೀ ಹದನೂರ, ಸುನಂದಾ ಯಂಪುರೆ, ಪ್ರವೀಣ ಕಂಟಿಗೊಂಡ, ರಮೇಶ ನಡುವಿನಕೇರಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-26-73086497

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.