ಸಿಂದಗಿ: ಶಿಕ್ಷಕ, ಬರಹಗಾರ ಎಸ್.ಕೆ. ಗುಗ್ಗರಿ ಅವರಿಗೆ ಅಭಿಮಾನಿ ಬಳಗದಿಂದ ಮೇ 31ರಂದು ಇಲ್ಲಿನ ಜ್ಯೋತಿ ನಗರದ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯರು, ಕನ್ನೊಳ್ಳಿ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯರು, ಸಾರಂಗ–ಗಚ್ಚಿನ ಮಠದ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಸಮಾರಂಭವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸುವರು. ಮಾಜಿ ಶಾಸಕ ರಮೇಶ ಭೂಸನೂರ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಧ್ಯಾಪಕ ವಿಶ್ವನಾಥ ಶಿರಶ್ಯಾಡ, ಜಮಖಂಡಿ ಸಿ.ಟಿ.ಇ ಪ್ರವಾಚಕ ಶ್ರೀಶೈಲ ಬಿರಾದಾರ, ಪತ್ರಕರ್ತ ಶಾಂತೂ ಹಿರೇಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಅತಿಥಿ ಉಪನ್ಯಾಸಕಿ ವನಜಾಕ್ಷಿಮಹೇಂದ್ರ ಗುಗ್ಗರಿ, ಗುರುಲಿಂಗೇಶ್ವರ ಪತ್ತಿನ ಸಹಕಾರಿ ಸಂಘದ ವ್ಯವಸ್ಥಾಪಕವಿ.ಎಸ್.ಬಿರಾದಾರ, ಆಲಮೇಲ ಎಪಿಎಂಸಿ ಉಪಾಧ್ಯಕ್ಷ ಶಿವಶರಣಗುಂದಗಿ ಅವರನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಷಷ್ಠಿಪೂರ್ತಿ ಕಾರ್ಯಕ್ರಮವೂ ಜರುಗಲಿದೆ ಎಂದು ಅಭಿನಂದನಾ ಸಮಾರಂಭದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-26-2023325343

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.